News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶದಲ್ಲಿ 18 ಲಕ್ಷಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ: ಗಡ್ಕರಿ

ನವದೆಹಲಿ: ಇದುವರೆಗೆ ದೇಶದಲ್ಲಿ 18 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅವರು,  ಉತ್ತರ ಪ್ರದೇಶ, ದೆಹಲಿ ಮತ್ತು ಮಹಾರಾಷ್ಟ್ರ ಎಲೆಕ್ಟ್ರಿಕ್‌ ವಾಹನಗಳ ಮಾರಾಟದಲ್ಲಿ ಪ್ರಮುಖ ರಾಜ್ಯಗಳಾಗಿ ಹೊರಹೊಮ್ಮುತ್ತಿವೆ. ಉತ್ತರ ಪ್ರದೇಶದಲ್ಲಿ ಗರಿಷ್ಠ ಸಂಖ್ಯೆಯ 4,14,978 ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ ಎಂದಿದ್ದಾರೆ.

ಎರಡನೇ ಸ್ಥಾನದಲ್ಲಿ ದೆಹಲಿ ಇದ್ದು, ಇಲ್ಲಿ 1,83,74 ಎಲೆಕ್ಟ್ರಿಕ್‌ ವಾಹನಗಳು ನೋಂದಣಿಯಾಗಿವೆ ಮತ್ತು ಮಹಾರಾಷ್ಟ್ರದಲ್ಲಿ 1, 79,087 ಎಲೆಕ್ಟ್ರಿಕ್‌ ವಾಹನಗಳು ನೋಂದಣಿಯಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ  ಗರಿಷ್ಠ ಸಂಖ್ಯೆಯ ಅಂದರೆ 660 ಸಾರ್ವಜನಿಕ ಎಲೆಕ್ಟ್ರಿಕ್‌ ವೆಹ್ಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳು ಸ್ಥಾಪನೆಯಾಗಿದೆ, ನಂತರ ದೆಹಲಿಯಲ್ಲಿ 539 ಮತ್ತು ತಮಿಳುನಾಡಿನಲ್ಲಿ 439 ಇವಿ ಚಾರ್ಜಿಂಗ್‌ ಸ್ಟೇಶನ್‌ ಸ್ಥಾಪನೆಯಾಗಿದೆ ಎಂದು ಗಡ್ಕರಿ ತಿಳಿಸಿದ್ದಾರೆ.

ಭಾರತದಲ್ಲಿ ಒಟ್ಟು 5,151 ಸಾರ್ವಜನಿಕ ಇವಿ ಚಾರ್ಜಿಂಗ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಎಲೆಕ್ಟ್ರಾನಿಕ್ ಶುಲ್ಕ ಸಂಗ್ರಹ ವ್ಯವಸ್ಥೆ ಜಾರಿಯಿಂದ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆ ಗಣನೀಯವಾಗಿ ಕಡಿಮೆಯಾಗಿದೆ‌ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top