News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗುಜರಾತ್ ಮಾದರಿಯನ್ನು ಜನರು ಸ್ವೀಕರಿಸಿದ್ದಾರೆ: ಪ್ರಲ್ಹಾದ್‌ ಜೋಶಿ

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮುನ್ನುಗ್ಗುತ್ತಿದೆ‌. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಗುಜರಾತ್ ಮಾದರಿಯನ್ನು ಜನರು ಸ್ವೀಕರಿಸಿದ್ದಾರೆ ಮತ್ತು ಪ್ರಶಂಸಿಸಿದ್ದಾರೆ ಎಂದು ಹೇಳಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿನ ಗುಜರಾತ್ ಮಾದರಿಯನ್ನು 2001ರಿಂದ ಜನರು ಸ್ವೀಕರಿಸುತ್ತಾ ಬಂದಿದ್ದಾರೆ ಮತ್ತು ಪ್ರಶಂಸಿಸಿದ್ದಾರೆ. ದೇಶದ ಮುಂದೆ ನಾವಿಡುತ್ತಿರುವ ಮಾದರಿಯನ್ನು ಸ್ವೀಕರಿಸಲಾಗುತ್ತಿದೆ. ಇದು ಚುನಾವಣೆ ಇತಿಹಾಸದಲ್ಲಿ ಅತಿ ದೊಡ್ಡ ದಾಖಲೆ” ಎಂದು ಪ್ರಲ್ಹಾದ್ ಜೋಶಿ ಅವರು ಗುಜರಾತ್ ಗೆಲುವಿನ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಂದರ್ಭದಲ್ಲಿ ಹೇಳಿದ್ದಾರೆ.

ಗುಜರಾತ್ ಚುನಾವಣೆಯ ಮತ ಎಣಿಕೆಯ ಟ್ರೆಂಡ್‌ಗಳು ಬಿಜೆಪಿ 149 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವುದಾಗಿ ಸೂಚಿಸುತ್ತಿವೆ. ಎರಡನೇ ಸ್ಥಾನದಲ್ಲಿ ಕಾಂಗ್ರೆಸ್ ಇದ್ದು 18 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 182 ಸ್ಥಾನಗಳ ಗುಜರಾತ್ ನಲ್ಲಿ ಬಹುಮತಕ್ಕೆ 92 ಸ್ಥಾನಗಳು ಬೇಕಾಗಿವೆ.

ಆಮ್ ಆದ್ಮಿ ಪಕ್ಷ 8 ಸ್ಥಾನಗಳನ್ನು ಪಡೆದುಕೊಂಡು ಮೂರನೇ ಸ್ಥಾನದಲ್ಲಿದೆ. ಉಳಿದ ಮೂರು ಸ್ಥಾನಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top