News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಿಬಿಎಂಪಿ ಪ್ರಾಯೋಗಿಕವಾಗಿ ನಿರ್ಮಿಸಿದ ರ‍್ಯಾಪಿಡ್‌ ರಸ್ತೆ ಸಂಚಾರಕ್ಕೆ ಮುಕ್ತ

ಬೆಂಗಳೂರು: ಬಿಬಿಎಂಪಿ ವತಿಯಿಂದ ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ನಿರ್ಮಿಸಲಾಗಿರುವ ರ‍್ಯಾಪಿಡ್‌ ರಸ್ತೆಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಶಾಸಕ ಎಸ್.ರಘು, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, “ಪ್ರಿ ಕಾಸ್ಟ್ ತಂತ್ರಜ್ಞಾನ ಬಳಸಿ ನಿರ್ಮಾಣವಾಗುವ ರ‍್ಯಾಪಿಡ್‌ ರಸ್ತೆಗಳನ್ನು ಗುಣಮಟ್ಟ, ದರ, ಹಾಗೂ ಸಾಮರ್ಥ್ಯವನ್ನು ಪರಿಶೀಲಿಸಿದ ನಂತರ ಪರಿಗಣಿಸಲಾಗುವುದು. ಉತ್ತಮ ರಸ್ತೆ ಗಳ ಜೊತೆಗೆ ವೆಚ್ಚವೂ ಕಡಿಮೆ ಇರುವುದು ಮುಖ್ಯ. ಈ ಕುರಿತು ವರದಿಗಳು ಬಂದ ನಂತರ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು” ಎಂದರು.

ಬೆಂಗಳೂರಿನ ರಸ್ತೆ ನಿರ್ಮಾಣ ಮಾಡುವ ಸಂದರ್ಭಗಳಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ವೈಟ್ ಟಾಪಿಂಗ್ ಗೆ ಹೆಚ್ಚು ಸಮಯ ತಗುಲುತ್ತದೆ. ಒಂದು ಬಾರಿ ವೈಟ್ ಟಾಪಿಂಗ್ ನಂತರ ಸಮಸ್ಯೆ ಉಂಟಾದಲ್ಲಿ ಪುನಃ ಅದನ್ನು ತೆಗೆಯುವುದು ಕಷ್ಟದ ಕೆಲಸ. ಅದಕ್ಕೆಂದೇ ರ‍್ಯಾಪಿಡ್‌ ರಸ್ತೆ ತಂತ್ರಜ್ಞಾನ ಬಳಸಲಾಗಿದೆ. ಅಂತಿಮವಾಗಿ ಕಾಮಗಾರಿ ಕ್ಷಿಪ್ರ, ಗುಣಮಟ್ಟ, ಹಾಗೂ ಕಡಿಮೆ ವೆಚ್ಚದ್ದಾಗಿರಬೇಕು ಎಂದು ತಿಳಿಸಿದರು.

ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಂಡಿದ್ದು, ಕಡಿಮೆ ವೆಚ್ಚದಲ್ಲಿ ಬೆಂಗಳೂರಿನಲ್ಲಿ ವೈಟ್ ಟಾಪಿಂಗ್ ಅನ್ನು ಸಂಚಾರ ದಟ್ಟಣೆಯುಳ್ಳ, ಕ್ಷಿಪ್ರವಾಗಿ ರಸ್ತೆಯಾಗಬೇಕಿರುವ ಸ್ಥಳಗಳಲ್ಲಿ ಇದನ್ನು ಅಳವಡಿಸಬಹುದಾಗಿದೆ. ಎಸ್.ಆರ್.ದರಗಳಿಗೆ ಹೊಂದುವಂತಿದ್ದರೆ ಮಾತ್ರ ಇದನ್ನು ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top