News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಿಮಾಚಲ ಜನರ ಆಕಾಂಕ್ಷೆ ಈಡೇರಿಸುವ ಕಾರ್ಯ ಮುಂದುವರೆಯಲಿದೆ: ಮೋದಿ

ನವದೆಹಲಿ: ಗುಜರಾತಿನಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್‌ ಪಕ್ಷಕ್ಕೆ ಹಿಮಾಚಲ ಪ್ರದೇಶದ ಚುನಾವಣೆ ತುಸು ನಿರಾಳತೆ ನೀಡಿದೆ. ಅಲ್ಲಿ ಕಾಂಗ್ರೆಸ್‌ ಬಹುಮತ ಪಡೆದುಕೊಂಡು ಸರ್ಕಾರ ರಚನೆ ಮಾಡುವುದು ಖಚಿತವಾಗಿದೆ.

ಹಿಮಾಚಲ ಪ್ರದೇಶದ 68 ಸ್ಥಾನಗಳ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವು 35 ಸ್ಥಾನಗಳನ್ನು ಗೆದ್ದುಕೊಂಡಿದೆ, ಇದು ರಾಜ್ಯದಲ್ಲಿ ಸರ್ಕಾರವನ್ನು ರಚಿಸಲು ಬೇಕಾದ ಸ್ಪಷ್ಟ ಸಂಖ್ಯೆಯಾಗಿದೆ. ಪಕ್ಷ ಇನ್ನೂ 5 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ಇನ್ನೊಂದೆಡೆ ಚುನಾವಣೆಯಲ್ಲಿ ಸೋಲನ್ನು ಒಪ್ಪಿಕೊಂಡ ಹಿಮಾಚಲ ಸಿಎಂ ಜೈರಾಮ್ ಠಾಕೂರ್ ಅವರು ಶಿಮ್ಲಾದ ರಾಜಭವನದಲ್ಲಿ ರಾಜ್ಯಪಾಲ ಆರ್ ವಿ ಅರ್ಲೇಕರ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. “ನಾನು ನನ್ನ ರಾಜೀನಾಮೆಯನ್ನು ರಾಜ್ಯಪಾಲರಿಗೆ ನೀಡಿದ್ದೇನೆ. ಜನರ ಅಭಿವೃದ್ಧಿಗಾಗಿ ಕೆಲಸ ಮಾಡುವುದನ್ನು ಎಂದಿಗೂ ನಿಲ್ಲಿಸುವುದಿಲ್ಲ. ನಾವು ವಿಷಯಗಳನ್ನು ವಿಶ್ಲೇಷಿಸಬೇಕಾಗಿದೆ. ಕೆಲವು ಸಮಸ್ಯೆಗಳು ಫಲಿತಾಂಶದ ದಿಕ್ಕನ್ನು ಬದಲಾಯಿಸಿವೆ” ಎಂದಿದ್ದಾರೆ.

ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್‌ ಮಾಡಿ, ಹಿಮಾಚಲ ಜನರ ಆಶೋತ್ತರಗಳನ್ನು ಈಡೇರಿಸುವ ಕಾರ್ಯವನ್ನು ನಿರಂತರವಾಗಿ ಮಾಡುವುದಾಗಿ ತಿಳಿಸಿದ್ದಾರೆ

“ಬಿಜೆಪಿಯ ಮೇಲಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಹಿಮಾಚಲ ಪ್ರದೇಶದ ಜನರಿಗೆ ಧನ್ಯವಾದ ಹೇಳುತ್ತೇನೆ. ನಾವು ರಾಜ್ಯದ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಮುಂದಿನ ದಿನಗಳಲ್ಲಿ ಜನರ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿರಂತರ ಕೆಲಸ ಮಾಡುತ್ತೇವೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top