News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಳೆದ 5 ವರ್ಷದಲ್ಲಿ UPSC, SSC ಯಿಂದ 2,46,000 ಅಭ್ಯರ್ಥಿಗಳ ನೇಮಕ

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಮತ್ತು ಸ್ಟಾಫ್ ಸೆಲೆಕ್ಷನ್ ಕಮಿಷನ್ ಮೂಲಕ ಒಟ್ಟು 2 ಲಕ್ಷದ 46 ಸಾವಿರ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.

ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಖಾತೆ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಇಂದು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿದ್ದಾರೆ. ಪ್ರತಿ ವರ್ಷ ಸಚಿವಾಲಯಗಳು ಮತ್ತು ಇಲಾಖೆಗಳು ನೀಡುವ ಅವಶ್ಯಕತೆಗಳ ಆಧಾರದ ಮೇಲೆ ಖಾಲಿ ಹುದ್ದೆಗಳನ್ನು ಜಾಹೀರಾತು ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಭರ್ತಿಯಾಗದ ಹುದ್ದೆಗಳನ್ನು ಭರ್ತಿ ಮಾಡಲು ಸಕಾಲಿಕ ಕ್ರಮಕ್ಕಾಗಿ ಸರ್ಕಾರವು ಈಗಾಗಲೇ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚನೆಗಳನ್ನು ನೀಡಿದೆ ಎಂದು ಸಚಿವರು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top