News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗಡಿ ವಿವಾದ: ಕರ್ನಾಟಕ, ಮಹಾ ಸಿಎಂಗಳೊಂದಿಗೆ ಸಭೆ ನಡೆಸಲಿದ್ದಾರೆ ಅಮಿತ್‌ ಶಾ

ನವದೆಹಲಿ: ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಣ ಗಡಿ ವಿವಾದ ತಾರಕಕ್ಕೇರಿದ್ದು ಗಡಿ ಭಾಗದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಪರಿಸ್ಥಿತಿ ಶಮನಗೊಳಿಸಲು ಮುಂದಾಗಿದೆ.

ಮೂಲಗಳ ಪ್ರಕಾರ, ಮಹಾರಾಷ್ಟ್ರ, ಕರ್ನಾಟಕ ಎರಡು ರಾಜ್ಯಗಳ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವ ಸಭೆ ಕರೆದಿದ್ದಾರೆ.

ಡಿಸೆಂಬರ್ 14 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ

ಇಂದು ದೆಹಲಿಯಲ್ಲಿಉದ್ಧವ್‌ ಠಾಕ್ರೆ ಬಣದ ಶಿವಸೇನೆ ಸಂಸದರ ನಿಯೋಗ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದ ಹಿಂಸಾಚಾರದ ಹಂತಕ್ಕೆ ತಲುಪುವ ಸಾಧ್ಯತೆ ಇದೆ ಎಂದು ನಿಯೋಗವು ಸಭೆಯಲ್ಲಿ ಶಾ ಅವರಿಗೆ ಮನವರಿಕೆ ಮಾಡಿದೆ ಎನ್ನಲಾಗಿದೆ.

ಹೀಗಾಗಿ ಡಿಸೆಂಬರ್ 14 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಭೆಯನ್ನು ಅಮಿತ್ ಶಾ ಚರ್ಚೆಗೆ ಕರೆದಿದ್ದಾರೆ ಎನ್ನಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top