News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 8th February 2023


×
Home About Us Advertise With s Contact Us

ಚೀನಾ ಸರಕುಗಳ ಮೇಲಿನ ಅವಲಂಬನೆ ಕಡಿಮೆಗೊಳಿಸಲು ಹಲವು ಕ್ರಮ: ಕೇಂದ್ರ

ನವದೆಹಲಿ: ಚೀನಾದ ಸರಕುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶೀಯ ಕೈಗಾರಿಕೆಗಳ ಉತ್ಪಾದನಾ ಸಾಮರ್ಥ್ಯ ಮತ್ತು ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಇಂದು ರಾಜ್ಯಸಭೆಯಲ್ಲಿ ಭಾರತ-ಚೀನಾ ವ್ಯಾಪಾರ ಸಂಬಂಧದ ಬಗೆಗಿನ ಪ್ರಶ್ನೆಗಳಿಗೆ ಉತ್ತರಿಸಿದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ಸರ್ಕಾರವು ಮೇಕ್ ಇನ್ ಇಂಡಿಯಾ ಉಪಕ್ರಮದ ಮೇಲೆ ಕೇಂದ್ರೀಕರಿಸಿದೆ ಮತ್ತು ದೇಶೀಯ ಕೈಗಾರಿಕೆಗಳಿಗೆ ಉತ್ಪಾದನಾ ಸಂಬಂಧಿತ ಪ್ರೋತ್ಸಾಹವನ್ನು ನೀಡುವ ಮೂಲಕ ಅವುಗಳ ಉತ್ಪಾದನಾ ಸಾಮರ್ಥ್ಯಗಳನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಚೀನಾದೊಂದಿಗಿನ ವ್ಯಾಪಾರ ಕೊರತೆಯ ಹೆಚ್ಚಳಕ್ಕೆ ಹಿಂದಿನ ಯುಪಿಎ ಸರ್ಕಾರವೇ ಕಾರಣ ಎಂದ ಅವರು, 2003-04ರಲ್ಲಿ ಚೀನಾದೊಂದಿಗೆ ಒಂದು ಬಿಲಿಯನ್ ಯುಎಸ್ ಡಾಲರ್ ಇದ್ದ ವ್ಯಾಪಾರ ಕೊರತೆ 10 ವರ್ಷಗಳಲ್ಲಿ 36 ಬಿಲಿಯನ್ ಯುಎಸ್ ಡಾಲರ್‌ಗೆ ಏರಿದೆ ಎಂದು ಅವರು ಹೇಳಿದರು. ಈ 10 ವರ್ಷಗಳಲ್ಲಿ ಭಾರತವು ಕಳಪೆ ಗುಣಮಟ್ಟದ ಸರಕುಗಳನ್ನು ದೇಶಕ್ಕೆ ಆಹ್ವಾನಿಸುವ ದೊಡ್ಡ ಮಾರುಕಟ್ಟೆಯಾಗಿದೆ ಎಂದು ಸಚಿವರು ಹೇಳಿದರು ಮತ್ತು ಚೀನಾದಿಂದ ಆಮದು 2003-04 ರಲ್ಲಿ ನಾಲ್ಕು ಬಿಲಿಯನ್ ಯುಎಸ್ ಡಾಲರ್‌ಗಳಿಂದ 2013-14 ರಲ್ಲಿ 51 ಬಿಲಿಯನ್ ಯುಎಸ್ ಡಾಲರ್‌ಗಳಿಗೆ ಏರಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top