News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮುಂದಿನ ಆ.15 ರೊಳಗೆ 1,000 ಖೇಲೋ ಇಂಡಿಯಾ ಕೇಂದ್ರ ಸ್ಥಾಪನೆ

ನವದೆಹಲಿ: ಮುಂದಿನ ವರ್ಷ ಆಗಸ್ಟ್ 15 ರೊಳಗೆ ದೇಶಾದ್ಯಂತ 1,000 ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಇಂದು ಹೇಳಿದ್ದಾರೆ.

ಈ 1,000 ಕೇಂದ್ರಗಳ ಪೈಕಿ 733 ಕೇಂದ್ರಗಳಿಗೆ ಈಗಾಗಲೇ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಕ್ರೀಡೆಗೆ ಉತ್ತೇಜನ ನೀಡುವ ಅಗತ್ಯದ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಸಚಿವರು, ಕ್ರೀಡೆಯ ಉತ್ತೇಜನಕ್ಕೆ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದರು.

ಟೋಕಿಯೊ ಒಲಿಂಪಿಕ್ಸ್ ಅಥವಾ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವು ಹಿಂದಿಗೆ ಹೋಲಿಸಿದರೆ ಉತ್ತಮ ಪ್ರದರ್ಶನ ನೀಡಿದೆ ಎಂದು ಠಾಕೂರ್ ಹೇಳಿದ್ದಾರೆ. ಕಿವುಡರ ಒಲಿಂಪಿಕ್ಸ್‌ನಲ್ಲೂ ಭಾರತ ಉತ್ತಮ ಪ್ರದರ್ಶನ ನೀಡಿದೆ ಎಂದರು.

ಖೇಲೋ ಇಂಡಿಯಾ ಕುರಿತು ಮಾತನಾಡಿದ ಸಚಿವರು, ಕ್ರೀಡೆಯತ್ತ ಜನರ ಮನಸ್ಥಿತಿಯನ್ನು ಬದಲಾಯಿಸಲು ಸರ್ಕಾರ ಕೆಲಸ ಮಾಡಿದೆ. ಖೇಲೋ ಇಂಡಿಯಾ ಆಟಗಳು ತಳಮಟ್ಟದ ಆಟಗಾರರಿಗೆ ಇಡೀ ರಾಷ್ಟ್ರದ ಮುಂದೆ ತಮ್ಮ ಪ್ರತಿಭೆಯನ್ನು ತೋರಿಸಲು ವೇದಿಕೆಯನ್ನು ಒದಗಿಸಿವೆ ಎಂದು  ಹೇಳಿದರು.

ಕ್ರೀಡಾ ಮೂಲಸೌಕರ್ಯವನ್ನು ಸುಧಾರಿಸಲು ಗಮನ ನೀಡಲಾಗುತ್ತಿದೆ. ಪ್ಯಾರಾ ಅಥ್ಲೀಟ್‌ಗಳ ಬಗ್ಗೆ ಸರ್ಕಾರ ಯಾವುದೇ ತಾರತಮ್ಯ ತೋರಿಲ್ಲ ಎಂದು ಭರವಸೆ ನೀಡಿದರು.

ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ನ ಅಧೀರ್ ರಂಜನ್ ಚೌಧರಿ, ಇತರ ದೇಶಗಳಿಗೆ ಹೋಲಿಸಿದರೆ ಭಾರತ ಕ್ರೀಡೆಯಲ್ಲಿ ಹಿಂದುಳಿದಿದೆ. ದೇಶ ಹಿಂದುಳಿದಿರುವ ಕ್ಷೇತ್ರಗಳನ್ನು ಹೇಗೆ ಪರಿಹರಿಸಬೇಕು ಎಂಬ ಬಗ್ಗೆ ಪಕ್ಷಗಳು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದರು. ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯಕ್ಕೆ ಬಜೆಟ್‌ನಲ್ಲಿ ಮೀಸಲಿಡುವ ಮೊತ್ತವನ್ನು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಭಾರತ ಕ್ರಿಕೆಟ್‌ನಲ್ಲಿ ಮಾತ್ರ ಉತ್ತಮ ಪ್ರದರ್ಶನ ನೀಡುತ್ತಿದೆ ಆದರೆ ಹಾಕಿ ಮತ್ತು ಫುಟ್‌ಬಾಲ್‌ನಂತಹ ಕ್ರೀಡೆಗಳಲ್ಲಿ ಹಿಂದೆ ಬೀಳುತ್ತಿದೆ ಎಂದು ಬಿಎಸ್‌ಪಿಯ ರಿತೇಶ್ ಪಾಂಡೆ ಗಮನಸೆಳೆದಿದ್ದಾರೆ. ಹಣದ ಕೊರತೆ ಮತ್ತು ತರಬೇತುದಾರರ ಕೊರತೆ ಇದಕ್ಕೆ ಕೆಲವು ಕಾರಣಗಳಾಗಿವೆ ಎಂದು ಅವರು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top