News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತಮಿಳುನಾಡಿನಲ್ಲಿ ಆವಾಂತರ ಸೃಷ್ಟಿಸಿದ ಮಾಂಡೌಸ್ ಚಂಡಮಾರುತ

ಚೆನ್ನೈ: ಮಾಂಡೌಸ್ ಚಂಡಮಾರುತವು ಉತ್ತರ ತಮಿಳುನಾಡನ್ನು ನಲುಗುವಂತೆ ಮಾಡಿದೆ. ಪರಿಣಾಮ ನಿನ್ನೆ ಮಧ್ಯರಾತ್ರಿಯಿಂದ ಅಲ್ಲಲ್ಲಿ ಭೂಕುಸಿತವಾಗಿದೆ. ದೊಡ್ಡ ದೊಡ್ಡ ಮರಗಳು ಧರೆಗುರುಳಿವೆ ಮತ್ತು ರಸ್ತೆಗಳು ಜಲಾವೃತಗೊಂಡಿದೆ. ಗಂಟೆಗೆ 75 ಕಿಮೀ ವೇಗದಲ್ಲಿ ಗಾಳಿ ಬೀಸುವ ಮೂಲಕ ತಮಿಳುನಾಡಿನ ಕರಾವಳಿಯನ್ನು ಪ್ರಸ್ತುತ ಚಂಡಮಾರುತ ದಾಟಿದೆ.

ಮಾಂಡೌಸ್ ಚಂಡಮಾರುತವು ತಮಿಳುನಾಡಿನ ಕರಾವಳಿಗೆ ಸಮೀಪಿಸುತ್ತಿದ್ದಂತೆ ಹಲವು ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗಿದೆ ಮತ್ತು ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ. ಮಾಂಡೌಸ್ ಚಂಡಮಾರುತ ಇಂದು ಮಧ್ಯರಾತ್ರಿ ಕರಾವಳಿಯನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇಂದು ಬೆಳಗ್ಗೆ ಚೆನ್ನೈನ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆ 6 ರಿಂದ ಮಧ್ಯರಾತ್ರಿಯವರೆಗೆ ಚೆನ್ನೈನಿಂದ ತೆರಳುವ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಆದರೆ, ಸಬ್ ಅರ್ಬನ್ ರೈಲು ಸೇವೆಗಳು ಸೇರಿದಂತೆ ಇತರೆ ರೈಲುಗಳು ಕಾರ್ಯನಿರ್ವಹಿಸಲಿವೆ.

ಉತ್ತರ ಒಳನಾಡಿನ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದಿಂದಾಗಿ ಚೆನ್ನೈ ಮತ್ತು ಉಪನಗರ ಪ್ರದೇಶಗಳಲ್ಲಿ ಗರಿಷ್ಠ 16 ಸೆಂ.ಮೀ ವರೆಗೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ಮುಖ್ಯಸ್ಥರು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಕರಾವಳಿ ತೀರದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಚಂಡಮಾರುತದ ಸಂದರ್ಭದ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಕರಾವಳಿ ಜಿಲ್ಲೆಗಳು ಮತ್ತು ರಾಯಲಸೀಮಾ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಸಾಧಾರಣ ಮಳೆಯಾಗಿದೆ.

ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಅತಿ ಹೆಚ್ಚು ಮಳೆ ಮತ್ತು ಗಾಳಿಯ ಎಚ್ಚರಿಕೆಯ ಆರೆಂಜ್ ಅಲರ್ಟ್ ವಿಧಿಸಲಾಗಿದೆ.

ಚಂಡಮಾರುತದ ಕಾರಣ, ಶಿಕ್ಷಣ ಸಂಸ್ಥೆಗಳು ಮುಚ್ಚಿದೆ. ರಾಜ್ಯದಲ್ಲಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮಾಂಡೌಸ್ ಪ್ರಭಾವದಿಂದ ಪುದುಚೇರಿಯಲ್ಲಿ ನಿನ್ನೆ ಸಾಧಾರಣ ಮಳೆಯಾಗಿದೆ. ಈಗ ಆಕಾಶ ಶುಭ್ರವಾಗಿದೆ. ಇದುವರೆಗೆ ಯಾವುದೇ ಮಹತ್ವದ ಘಟನೆ ವರದಿಯಾಗಿಲ್ಲ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top