News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸುರಕ್ಷಿತ್ ಮಾತೃತ್ವ ಅಭಿಯಾನದಡಿ 3.60 ಕೋಟಿ ಗರ್ಭಿಣಿಯರ ಆರೈಕೆ

ನವದೆಹಲಿ: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಿತ್ ಮಾತೃತ್ವ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ 3.60 ಕೋಟಿಗೂ ಅಧಿಕ ಗರ್ಭಿಣಿಯರು ಸಮಗ್ರ ಪ್ರಸವಪೂರ್ವ ಆರೈಕೆಯನ್ನು ಪಡೆದಿದ್ದಾರೆ ಎಂದು ಸರ್ಕಾರ ಹೇಳಿದೆ.

ಶುಕ್ರವಾರ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಈ ವಿಷಯ ತಿಳಿಸಿದರು.

ಎಲ್ಲಾ ಗರ್ಭಿಣಿಯರಿಗೆ ಸಾರ್ವತ್ರಿಕವಾಗಿ ಪ್ರತಿ ತಿಂಗಳ 9 ನೇ ದಿನದಂದು ಉಚಿತ, ಖಚಿತವಾದ, ಸಮಗ್ರ ಮತ್ತು ಗುಣಮಟ್ಟದ ಪ್ರಸವಪೂರ್ವ ಆರೈಕೆಯನ್ನು ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ಡಾ. ಪವಾರ್ ಅವರು, ಸಾರ್ವಜನಿಕ ಸೌಲಭ್ಯಗಳಲ್ಲಿ ಸಾಂಸ್ಥಿಕ ಹೆರಿಗೆ ಹೊಂದಿರುವ ಗರ್ಭಿಣಿ ಮಹಿಳೆಯರ ಶೇಕಡಾವಾರು ಪ್ರಮಾಣವು 2015-16 ರಲ್ಲಿ ಇದ್ದ ಶೇಕಡಾ 52 ರಿಂದ 2019-21 ರಲ್ಲಿ ಶೇಕಡಾ 62 ಕ್ಕೆ ಏರಿದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top