News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನಾಳೆ ನಾಗ್ಪುರ ಏಮ್ಸ್‌, 3 ರಾಷ್ಟ್ರೀಯ ಆಯುಷ್ ಸಂಸ್ಥೆ ಉದ್ಘಾಟಿಸಲಿದ್ದಾರೆ ಮೋದಿ

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಹಾರಾಷ್ಟ್ರ ಮತ್ತು ಗೋವಾಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಗ್ಗೆ 10 ಗಂಟೆಗೆ ನಾಗ್ಪುರ ರೈಲು ನಿಲ್ದಾಣವನ್ನು ತಲುಪಿ ಅಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದಾರೆ.

ಪ್ರಧಾನಮಂತ್ರಿಯವರು ಫ್ರೀಡಂ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಖಾಪ್ರಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸವಾರಿ ಮಾಡಲಿದ್ದು, ಅಲ್ಲಿ ‘ನಾಗ್ಪುರ ಮೆಟ್ರೋ ಹಂತ I’ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಕಾರ್ಯಕ್ರಮದ ಸಮಯದಲ್ಲಿ, ಅವರು ‘ನಾಗ್ಪುರ ಮೆಟ್ರೋ ಹಂತ- II’ ನ ಶಂಕುಸ್ಥಾಪನೆಯನ್ನೂ ಮಾಡಲಿದ್ದಾರೆ.

ಅವರು ನಾಗ್ಪುರ ಮತ್ತು ಶಿರಡಿಯನ್ನು ಸಂಪರ್ಕಿಸುವ ಸಮೃದ್ಧಿ ಮಹಾಮಾರ್ಗ್‌ನ ಹಂತ-1 ಅನ್ನು ಉದ್ಘಾಟಿಸುತ್ತಾರೆ ಮತ್ತು ಹೆದ್ದಾರಿಯಲ್ಲಿ ಪ್ರವಾಸವನ್ನು ಕೈಗೊಳ್ಳುತ್ತಾರೆ. ಮೋದಿ ಅವರು ಏಮ್ಸ್-ನಾಗ್ಪುರವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ನಾಗ್ಪುರದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿಯವರು 1500 ಕೋಟಿ ರೂಪಾಯಿ ಮೌಲ್ಯದ ರೈಲು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ದೇಶಕ್ಕೆ ಸಮರ್ಪಿಸಲಿದ್ದಾರೆ. ಅವರು ನಾಗ್ಪುರದಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಒನ್ ಹೆಲ್ತ್ ಮತ್ತು ನಾಗ್ ನದಿ ಮಾಲಿನ್ಯ ನಿವಾರಣೆ ಯೋಜನೆಯ ಅಡಿಗಲ್ಲು ಹಾಕಲಿದ್ದಾರೆ.

ನಂತರ ಗೋವಾದಲ್ಲಿ 9ನೇ ವಿಶ್ವ ಆಯುರ್ವೇದ ಕಾಂಗ್ರೆಸ್‌ನ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಮೂರು ರಾಷ್ಟ್ರೀಯ ಆಯುಷ್ ಸಂಸ್ಥೆಗಳನ್ನು ಉದ್ಘಾಟಿಸಲಿದ್ದಾರೆ. ಗೋವಾದಲ್ಲಿ ಮೋಪಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಹ ಉದ್ಘಾಟಿಸಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top