News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ಗುಜರಾತ್‌ ಸಿಎಂ ಆಗಿ 2ನೇ ಬಾರಿಗೆ ಭೂಪೇಂದ್ರ ಪಟೇಲ್‌ ಪ್ರಮಾಣವಚನ

ಗಾಂಧಿನಗರ: ಗುಜರಾತ್‌ ಬಿಜೆಪಿ ನಾಯಕ ಭೂಪೇಂದ್ರ ಪಟೇಲ್ ಅವರು ಸೋಮವಾರ ಗಾಂಧಿನಗರದಲ್ಲಿ ಸತತ ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಬಳಿಯ ಹೆಲಿಪ್ಯಾಡ್ ಮೈದಾನದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು 18ನೇ ಮುಖ್ಯಮಂತ್ರಿಯಾಗಿ ಪಟೇಲ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನೇತೃತ್ವದ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಅಪಾರ ಗಣ್ಯರು ಆಭಗಿಯಾಗುವ ನಿರೀಕ್ಷೆ ಇದೆ.

ಮೂಲಗಳ ಪ್ರಕಾರ, ಭೂಪೇಂದ್ರ ಪಟೇಲ್ ಅವರೊಂದಿಗೆ ಸುಮಾರು 20 ಸಂಪುಟ ಸಚಿವರು ಅದೇ ದಿನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮತ್ತು ಮರುದಿನವೇ ತಮ್ಮ ಕಚೇರಿಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗೆದ್ದು ಮುನ್ನಡೆದಿದೆ, ಇದು 1960 ರಲ್ಲಿ ಗುಜರಾತ್ ರಾಜ್ಯ ರಚನೆಯಾದ ನಂತರ ಯಾವುದೇ ಪಕ್ಷವು ಗಳಿಸದ ಅತಿ ಹೆಚ್ಚು ಸ್ಥಾನಗಳಾಗಿದೆ.

1960 ರಲ್ಲಿ ಈ ರಾಜ್ಯ ಸ್ಥಾಪನೆಯಾದ ನಂತರ ಗುಜರಾತ್‌ನಲ್ಲಿ ಬಿಜೆಪಿಯ ಸತತ ಏಳನೇ‌ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top