ನವದೆಹಲಿ: ಜಮ್ಮು ಮತ್ತು ಕಾಶ್ಮೀರವು ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್ ಐಡಿ ಜನರೇಷನ್ ವಿಭಾಗದಲ್ಲಿ ಮೊದಲನೇ ಮತ್ತು ಟೆಲಿಕಾನ್ಸಲ್ಟೇಶನ್ ವಿಭಾಗದಲ್ಲಿ 2 ನೇ ಬಹುಮಾನವನನ್ನು ಪಡೆದುಕೊಂಡಿದೆ.
2022 ರ ಯುನಿವರ್ಸಲ್ ಹೆಲ್ತ್ ಕವರೇಜ್ ಡೇ ಆಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ನೀಡಲಾಗಿದೆ. ಇದನ್ನು ವಾರಣಾಸಿಯಲ್ಲಿ ಡಿಸೆಂಬರ್ 10 ಮತ್ತು 11 ರಂದು ಅಂತರರಾಷ್ಟ್ರೀಯ ಸಹಕಾರ ಮತ್ತು ಸಮಾವೇಶದಲ್ಲಿ ಆಚರಿಸಲಾಗಿದೆ.
ಯೂನಿವರ್ಸಲ್ ಹೆಲ್ತ್ ಕವರೇಜ್ ಡೇ ಅನ್ನು ಪ್ರತಿ ವರ್ಷವೂ ಸಾರ್ವತ್ರಿಕ ಆರೋಗ್ಯ ರಕ್ಷಣೆಯ ಮಹತ್ವವನ್ನು ಸ್ಮರಿಸಲು ಆಚರಿಸಲಾಗುತ್ತದೆ, ಇದು ಯಾವುದೇ ಆರ್ಥಿಕ ತೊಂದರೆಗಳಿಲ್ಲದೆ ಗುಣಮಟ್ಟದ ಆರೋಗ್ಯವನ್ನು ಜನರಿಗೆ ಹತ್ತಿರವಾಗಿಸುವ ಗುರಿಯನ್ನು ಹೊಂದಿದೆ.
ಈ ಕಾರ್ಯಕ್ರಮದಲ್ಲಿ ಯುಪಿ ಗವರ್ನರ್ ಆನಂದಿಬೆನ್ ಪಟೇಲ್, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಸೇರಿದಂತೆ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹಿರಿಯ ಅಧಿಕಾರಿಗಳು, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಅಭಿವೃದ್ಧಿ ಪಾಲುದಾರರು ಭಾಗಿಯಾಗಿದ್ದರು.
ಜಮ್ಮು-ಕಾಶ್ಮೀರದ ನೋಡೆಲ್ ಅಧಿಕಾರಿ ಡಾ. ಮೊಹಮ್ಮದ್ ಶಾಫಿ ಕೋಕಾ, ಸಮಾರಂಭದಲ್ಲಿ ಭಾಗವಹಿಸಿ ಕೇಂದ್ರ ಆರೋಗ್ಯ ಸಚಿವರಿಂದ ಪ್ರಶಸ್ತಿಗಳನ್ನು ಸ್ವೀಕರಿಸಿದರು. ಸಚಿವರು ಆರೋಗ್ಯ ವಿತರಣಾ ವ್ಯವಸ್ಥೆಯಲ್ಲಿ ಮೈಲಿಗಲ್ಲುಗಳನ್ನು ಸಾಧಿಸಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರವನ್ನು ವೈಯಕ್ತಿಕವಾಗಿ ಅಭಿನಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.