News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ಕೊಲೆಗೆ ಸಿದ್ಧರಾಗಲು ಕಾರ್ಯಕರ್ತರಿಗೆ ಕಾಂಗ್ರೆಸ್‌ ನಾಯಕನ ಕರೆ

ಭೋಪಾಲ್: ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ಪ್ರಚೋದನೆ ನೀಡಿದ್ದಾರೆ. ಸಂವಿಧಾನವನ್ನು ಉಳಿಸಲು ಬಯಸಿದರೆ ಪ್ರಧಾನಿ ನರೇಂದ್ರ ಮೋದಿಯನ್ನು ಕೊಂದು ಹಾಕಲು ಸಿದ್ಧರಾಗಿರಿ ಎಂದು ಅವರು ಪ್ರಚೋದನಾಕಾರಿ ಭಾಷಣ ಮಾಡಿ ವಿವಾದ ಸೃಷ್ಟಿಸಿದ್ದಾರೆ.

“ಮೋದಿ ಚುನಾವಣೆಯನ್ನು ಕೊನೆಗೊಳಿಸುತ್ತಾರೆ, ಮೋದಿ ಧರ್ಮ, ಜಾತಿ, ಭಾಷೆಯ ಆಧಾರದ ಮೇಲೆ ವಿಭಜನೆ ಮಾಡುತ್ತಾರೆ. ದಲಿತರು, ಬುಡಕಟ್ಟುಗಳು ಮತ್ತು ಅಲ್ಪಸಂಖ್ಯಾತರ ಜೀವನ ಅಪಾಯದಲ್ಲಿದೆ. ಸಂವಿಧಾನವನ್ನು ಉಳಿಸಬೇಕಾದರೆ ಮೋದಿಯನ್ನು ಕೊಲ್ಲಲು ಸಿದ್ಧರಾಗಿ” ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ಕಾಂಗ್ರೆಸ್‌ ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ, ಹಲವಾರು ಬಿಜೆಪಿ ನಾಯಕರು ಪಟೇರಿಯಾ ಅವರ ಬಂಧನಕ್ಕೆ ಕರೆ ನೀಡಿದ್ದಾರೆ.

ತನ್ನ ಹೇಳಿಕೆಗೆ ಇದೀಗ ಸಮರ್ಥನೆ ನೀಡಿರುತ್ತಿರುವ ಪಟೇರಿಯಾ ಕೊಲ್ಲುವುದು ಎಂದರೆ ಸೋಲಿಸುವುದು ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದಾಗಿ ಹೇಳಿಕೊಂಡಿದ್ದಾರೆ.

ಮಧ್ಯಪ್ರದೇಶ ಸರ್ಕಾರವು ಪಟೇರಿಯಾ ವಿರುದ್ಧ ಪೊಲೀಸ್ ಪ್ರಕರಣಕ್ಕೆ ಆದೇಶಿಸಿದೆ. ಮಾಜಿ ಸಚಿವರೊಬ್ಬರು ಪ್ರಧಾನಿ ವಿರುದ್ಧ ಇಂತಹ ಹೇಳಿಕೆ ನೀಡಿದ್ದು ಕ್ಷಮಿಸಲಾಗದ ಅಪರಾಧ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಅವರು ಕಿಡಿಕಾರಿದ್ದಾರೆ.

“ಭಾರತ್ ಜೋಡೋ ಯಾತ್ರೆ ಮಾಡುವವರ ನಿಜವಾದ ಮುಖ ಹೊರಬರುತ್ತಿದೆ. ಪಟೇರಿಯಾ ಕಾಂಗ್ರೆಸ್‌ನ ನೈಜ ಭಾವನೆಯನ್ನು ಬಹಿರಂಗಪಡಿಸಿದ್ದಾರೆ. ಗೌರವಾನ್ವಿತ ಪ್ರಧಾನಿ ಮೋದಿ ಅವರು ಜನರ ಹೃದಯದಲ್ಲಿ ನೆಲೆಸಿದ್ದಾರೆ, ಅವರು ಇಡೀ ದೇಶದ ಅಭಿಮಾನ ಮತ್ತು ನಂಬಿಕೆಯ ಕೇಂದ್ರವಾಗಿದ್ದಾರೆ. ಕಾಂಗ್ರೆಸ್ ಜನರು ಚುನಾವಣಾ ಯುದ್ಧದಲ್ಲಿ ಪ್ರಧಾನಿಯನ್ನು ಎದುರಿಸಲು ಸಾಧ್ಯವಿಲ್ಲ, ಮತ್ತು ಒಬ್ಬ ಕಾಂಗ್ರೆಸ್ ನಾಯಕ ಅವರ ಹತ್ಯೆಯ ಬಗ್ಗೆ ಮಾತನಾಡುತ್ತಾನೆಂದರೆ ಅದು ಅಸೂಯೆಯ ಪರಮಾವಧಿ, ಇದು ಅತಿಯಾದ ದ್ವೇಷ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top