News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

LACಯಲ್ಲಿ ಭಾರತ, ಚೀನಾ ಸೈನಿಕರ ನಡುವೆ ಘರ್ಷಣೆ: ಎರಡೂ ಕಡೆ ಸಣ್ಣಪುಟ್ಟ ಗಾಯ

ನವದೆಹಲಿ: ಕಳೆದ ವಾರ ಅರುಣಾಚಲ ಪ್ರದೇಶದ ಎಲ್‌ಎಸಿಯಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವೆ ಘರ್ಷಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಡಿಸೆಂಬರ್ 9 ರಂದು ನಡೆದ ಘರ್ಷಣೆಯಲ್ಲಿ ಎರಡೂ ಕಡೆಯ ಕೆಲವು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಮತ್ತು ಎರಡು ಕಡೆಯವರು ತಕ್ಷಣವೇ ಪ್ರದೇಶದಿಂದ ಹೊರ ನಡೆದರು ಎನ್ನಲಾಗಿದೆ.

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಮುಖಾಮುಖಿಯಾಗಿದೆ. ಚೀನೀ ಸೈನಿಕರು LAC ಅನ್ನು ದಾಟಿದಾಗ ಭಾರತೀಯ ಸೈನಿಕರು ದೃಢವಾದ ರೀತಿಯಲ್ಲಿಅವರನ್ನು ಎದುರಿಸಿ ಹಿಮ್ಮೆಟ್ಟಿಸಿದ್ದಾರೆ.

ಪೂರ್ವ ಲಡಾಖ್‌ನಲ್ಲಿ ನಡೆದ ಘರ್ಷಣೆಯ ನಂತರ ಭಾರತ ಮತ್ತು ಚೀನಾದ ಸೈನಿಕರ ನಡುವೆ ಇಂತಹ ಘರ್ಷಣೆಗಳು ವರದಿಯಾಗುತ್ತಿರುವುದು ಬಹಳ ಸಮಯದ ನಂತರ ಇದೇ ಮೊದಲು.

2020 ರ ಜೂನ್‌ನಲ್ಲಿ ಗಾಲ್ವಾನ್ ಕಣಿವೆಯಲ್ಲಿ ಅತ್ಯಂತ ಭೀಕರವಾದ ಘರ್ಷಣೆಗಳು ಸಂಭವಿಸಿತ್ತು, ದೇಶಕ್ಕಾಗಿ 20 ಭಾರತೀಯ ಸೈನಿಕರು ಸಾವನ್ನಪ್ಪಿದರು ಮತ್ತು 40 ಕ್ಕೂ ಹೆಚ್ಚು ಚೀನೀ ಸೈನಿಕರು ಕೊಲ್ಲಲ್ಪಟ್ಟರು. ಈ ಘಟನೆಯು ಎರಡು ರಾಷ್ಟ್ರಗಳ ನಡುವೆ ಘರ್ಷಣೆಯ ಸರಣಿಯನ್ನು ಹುಟ್ಟುಹಾಕಿತ್ತು.

ಇದೀಗ ಮತ್ತೆ ಎಲ್‌ಎಸಿಯಲ್ಲಿ ಚೀನಾ ಕುಕೃತ್ಯ ನಡೆಸಿ ಘರ್ಷಣೆಗೆ ನಾಂದಿ ಹಾಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top