News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಾರತ-ಚೀನಾ ಗಡಿ ಘರ್ಷಣೆ: ಸೇನಾ ಮುಖ್ಯಸ್ಥರೊಂದಿಗೆ ರಾಜನಾಥ್‌ ಚರ್ಚೆ

ನವದೆಹಲಿ: ಕಳೆದ ವಾರ ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಗಡಿ ಘರ್ಷಣೆಗೆ ಸಂಬಂಧಿಸಿದಂತೆ  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಸಂಸತ್ತಿಗೆ ಮಾಹಿತಿ ನೀಡಲಿದ್ದಾರೆ. ಇದಕ್ಕೂ ಮುನ್ನ ಅವರು ಇಂದು ಸೇನಾ ಪಡೆಗಳ ಮುಖ್ಯಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಡಿಸೆಂಬರ್ 9 ರ ಗಡಿ ಘರ್ಷಣೆಯು ಭಾರತ ಮತ್ತು ಚೀನಾ ನಡುವಿನ ಹದಗೆಟ್ಟ ಸಂಬಂಧಗಳನ್ನು ಮತ್ತಷ್ಟು ಕೆಳಮಟ್ಟಕ್ಕಿಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಚರ್ಚಿಸಲು ದೇಶದ ಮಿಲಿಟರಿ ಮತ್ತು ರಾಜತಾಂತ್ರಿಕ ನಾಯಕತ್ವವು ಇಂದು ಸಭೆ ಸೇರಲಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರನ್ನು ಇಂದು ಭೇಟಿಯಾಗಲಿದ್ದಾರೆ.

ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ, ಗಿರಿಧರ್ ಅರಮನೆ ಕೂಡ ಉಪಸ್ಥಿತರಿರುವರು ಎಂದು ಮೂಲಗಳು ತಿಳಿಸಿವೆ.

ಶೀಘ್ರದಲ್ಲೇ, ರಕ್ಷಣಾ ಸಚಿವರು ಪ್ರಧಾನಿ ಮತ್ತು ಇತರ ಹಿರಿಯ ಸಂಪುಟ ಸಹೋದ್ಯೋಗಿಗಳನ್ನು ಭೇಟಿಯಾಗಲಿದ್ದು, ಪರಿಸ್ಥಿತಿಯ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಮತ್ತು ಪ್ರತಿಪಕ್ಷಗಳ ವಾಗ್ದಾಳಿಗೆ ಯಾವ ರೀತಿಯ ಉತ್ತರ ನೀಡಬೇಕು ಎಂಬುದನ್ನು ಚರ್ಚಿಸಲಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top