News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಏರ್‌ಪೋರ್ಟ್ ಅಭಿವೃದ್ಧಿಗೆ AAI, ಖಾಸಗಿಯವರಿಂದ 98,000 ಕೋಟಿ ರೂ ಹೂಡಿಕೆ

ನವದೆಹಲಿ: ವಾಯುಯಾನ ಕ್ಷೇತ್ರವನ್ನು ಉತ್ತೇಜಿಸುವ ಬೆಳವಣಿಗೆಗಳು ದೇಶದಲ್ಲಿ ನಡೆಯುತ್ತಿವೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಮತ್ತು ಇತರ ಖಾಸಗಿ ವಿಮಾನ ನಿಲ್ದಾಣ ನಿರ್ವಾಹಕರು ಹೊಸ ಮತ್ತು ಅಸ್ತಿತ್ವದಲ್ಲಿರುವ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಸುಮಾರು 98,000 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲಿದ್ದಾರೆ ಎಂದು ಸೋಮವಾರ ಸಂಸತ್ತಿಗೆ ತಿಳಿಸಲಾಗಿದೆ.

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಕೇಂದ್ರ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಜನರಲ್ (ನಿವೃತ್ತ) ವಿ ಕೆ ಸಿಂಗ್ ಅವರು, ವಿಮಾನ ಸಂಚಾರದಲ್ಲಿನ ಈ ಅಭೂತಪೂರ್ವ ಬೆಳವಣಿಗೆಯಿಂದ ಎದುರಾಗಿರುವ ಸವಾಲುಗಳನ್ನು ನಿಭಾಯಿಸಲು ವಾಣಿಜ್ಯ ಕಾರ್ಯಸಾಧ್ಯತೆ, ಸಂಚಾರ ಬೇಡಿಕೆ, ಭೂಮಿಯ ಲಭ್ಯತೆ ಇತ್ಯಾದಿಗಳನ್ನು ಅವಲಂಬಿಸಿ ಎಎಐ ವಿಮಾನ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.

“ಇದಲ್ಲದೆ, ವಾಯುಯಾನ ಕ್ಷೇತ್ರದ ಬೆಳವಣಿಗೆಯನ್ನು ಹೆಚ್ಚಿಸಲು, AAI ಮತ್ತು ಇತರ ಖಾಸಗಿ ವಿಮಾನ ನಿಲ್ದಾಣ ನಿರ್ವಾಹಕರು ಮುಂದಿನ ಐದು ವರ್ಷಗಳಲ್ಲಿ ಸುಮಾರು 98,000 ಕೋಟಿ ರೂಪಾಯಿಗಳ ಯೋಜಿತ ಬಂಡವಾಳ ವೆಚ್ಚದೊಂದಿಗೆ ಹೊಸ ಮತ್ತು ಅಸ್ತಿತ್ವದಲ್ಲಿರುವ ವಿಮಾನ ನಿಲ್ದಾಣಗಳ ಅಭಿವೃದ್ಧಿಯನ್ನು ಕೈಗೊಂಡಿದ್ದಾರೆ” ಎಂದು ಸಚಿವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top