News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಚೀನಿಯರನ್ನು ಭಾರತೀಯ ಯೋಧರು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದಾರೆ: ರಾಜನಾಥ್

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯಲ್ಲಿ ಭಾರತದ ಕಡೆಗೆ ಯಾವುದೇ ಗಂಭೀರ ಸಾವುನೋವುಗಳು ಸಂಭವಿಸಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಮಾಹಿತಿ ನೀಡಿದ್ದಾರೆ.

ಘಟನೆಯ ಕುರಿತು ಇಂದು ಲೋಕಸಭೆಯಲ್ಲಿ ಹೇಳಿಕೆ ನೀಡಿದ ಸಿಂಗ್, ತವಾಂಗ್ ಸೆಕ್ಟರ್‌ನ ಯಾಂಗ್ಟ್ಸೆ ಪ್ರದೇಶದಲ್ಲಿ ಚೀನಾದ ಸೈನಿಕರು ವಾಸ್ತವಿಕ ನಿಯಂತ್ರಣ ರೇಖೆಯನ್ನು ಉಲ್ಲಂಘಿಸಲು ಪ್ರಯತ್ನಿಸಿದರು ಮತ್ತು ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಮುಂದಾದರು. ಚೀನಾದ ಪ್ರಯತ್ನವನ್ನು ಭಾರತೀಯ ಸೈನಿಕರು ದೃಢವಾದ ರೀತಿಯಲ್ಲಿ ಎದುರಿಸಿದರು ಎಂದಿದ್ದಾರೆ.

ಚೀನಿಯರ ಧೋರಣೆ ದೈಹಿಕ ಘರ್ಷಣೆಗೆ ಕಾರಣವಾಯಿತು, ಭಾರತೀಯ ಸೇನೆಯು ಚೀನೀ ಸೈನಿಕರನ್ನು ಭಾರತೀಯ ಭೂಪ್ರದೇಶದೊಳಗೆ ಅತಿಕ್ರಮಿಸದಂತೆ ಧೈರ್ಯದಿಂದ ತಡೆದಿತು ಮತ್ತು ಅವರನ್ನು ಅವರ ಸ್ಥಾನಕ್ಕೆ ಮರಳುವಂತೆ ಮಾಡಿತು. ಘರ್ಷಣೆಯಿಂದಾಗಿ ಎರಡೂ ಕಡೆಯ ಕೆಲವು ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಅವರು ಹೇಳಿದರು.

ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಮಧ್ಯಸ್ಥಿಕೆಯಿಂದಾಗಿ ಚೀನಾ ಸೈನಿಕರು ತಮ್ಮ ಸ್ಥಳಗಳಿಗೆ ಮರಳಿದರು ಎಂದು ರಕ್ಷಣಾ ಸಚಿವರು ಹೇಳಿದರು. ಡಿಸೆಂಬರ್ 11 ರ ಭಾನುವಾರದಂದು ಎರಡೂ ಕಡೆಯ ಸ್ಥಳೀಯ ಕಮಾಂಡರ್‌ಗಳ ನಡುವೆ ಧ್ವಜ ಸಭೆ ನಡೆಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

ಇಂತಹ ಕ್ರಮಗಳಿಂದ ದೂರವಿರಲು ಮತ್ತು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಚೀನಾಗೆ ಕೇಳಿಕೊಳ್ಳಲಾಗಿದೆ. ರಾಜತಾಂತ್ರಿಕ ಮಾರ್ಗಗಳ ಮೂಲಕ ಚೀನಾದ ಕಡೆಗೂ ಈ ಸಮಸ್ಯೆಯನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top