News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಮ್ಮು-ಕಾಶ್ಮೀರ 2,500 ಕೋಟಿ ರೂಗಳ ಹೂಡಿಕೆ ಸ್ವೀಕರಿಸಿದೆ: ಕೇಂದ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಸರ್ಕಾರವು 64,000 ಕೋಟಿ ರೂಪಾಯಿಗಳ ಹೂಡಿಕೆಯ ಪ್ರಸ್ತಾವನೆಯನ್ನು ಸ್ವೀಕರಿಸಿದೆ. ಅದರಲ್ಲಿ 2,500 ಕೋಟಿ ರೂಪಾಯಿಗಳನ್ನು ಈಗಾಗಲೇ ಸ್ವೀಕರಿಸಲಾಗಿದೆ ಎಂದು ಲೋಕಸಭೆಗೆ ಕೇಂದ್ರ ಮಂಗಳವಾರ ತಿಳಿಸಿದೆ.

2017-18ರಲ್ಲಿ ರೂ.840.55 ಕೋಟಿ, 2018-19ರಲ್ಲಿ ರೂ.590.97 ಕೋಟಿ, 2019-20ರಲ್ಲಿ ರೂ.296.64 ಕೋಟಿ, 2020-21ರಲ್ಲಿ ರೂ.412.74 ಕೋಟಿ ಹಾಗೂ 2021-22ರಲ್ಲಿ ರೂ.376.76 ಕೋಟಿ ಹೂಡಿಕೆ ಬಂದಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಇಲ್ಲಿಯವರೆಗೆ ಸುಮಾರು 64,000 ಕೋಟಿ ರೂಪಾಯಿ ಮೌಲ್ಯದ ಹೂಡಿಕೆಗೆ ಪ್ರಸ್ತಾವನೆಗಳನ್ನು ಸ್ವೀಕರಿಸಿದೆ ಎಂದು ಅವರು ಲಿಖಿತ ಪ್ರಶ್ನೆಗೆ ಉತ್ತರಿಸಿದರು.

ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಸರ್ಕಾರವು ಹಸಿರು ಬಾಂಡ್‌ಗಳನ್ನು ವಿತರಿಸುವ ಸಾಧ್ಯತೆಯಿದೆ,
ಪ್ರಸಕ್ತ ಹಣಕಾಸು ವರ್ಷದ ಜನವರಿ-ಮಾರ್ಚ್ ಅವಧಿಯಲ್ಲಿ ಸಾರ್ವಭೌಮ ಗ್ರೀನ್ ಬಾಂಡ್‌ಗಳನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮಂಗಳವಾರ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top