News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತವಾಂಗ್‌ ಘರ್ಷಣೆ: ಭಾರತದ ಪ್ರಯತ್ನಗಳಿಗೆ ಸಂಪೂರ್ಣ ಬೆಂಬಲವಿದೆ ಎಂದ ಯುಎಸ್

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ ಬಳಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಯ ನಂತರ ಪರಿಸ್ಥಿತಿಯನ್ನು ನಿಯಂತ್ರಿಸುವ ಭಾರತದ ಪ್ರಯತ್ನಗಳಿಗೆ ಅಮೆರಿಕ ಬೆಂಬಲ ನೀಡಿದೆ.

ಪೆಂಟಗನ್ ಪತ್ರಿಕಾ ಕಾರ್ಯದರ್ಶಿ ಪ್ಯಾಟ್ ರೈಡರ್ ಹೇಳಿಕೆ ನೀಡಿ, “ನಮ್ಮ ಪಾಲುದಾರರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಬದ್ಧತೆಯಲ್ಲಿ ನಾವು ಸ್ಥಿರವಾಗಿರುವುದನ್ನು ಮುಂದುವರಿಸುತ್ತೇವೆ. ಪರಿಸ್ಥಿತಿಯನ್ನು ನಿಯಂತ್ರಿಸುವ ಭಾರತದ ಪ್ರಯತ್ನಗಳನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ” ಎಂದಿದ್ದಾರೆ.

“ಯುಎಸ್ ರಕ್ಷಣಾ ಇಲಾಖೆಯು ಭಾರತ-ಚೀನಾ ಗಡಿಯಲ್ಲಿ  ಬೆಳವಣಿಗೆಗಳನ್ನು ವೀಕ್ಷಿಸುವುದನ್ನು ಮುಂದುವರೆಸಿದೆ, ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ (ಪಿಆರ್‌ಸಿ) ಪಡೆಗಳನ್ನು ಒಟ್ಟು ಸೇರಿಸುವುದನ್ನುಮ ತ್ತು ಎಲ್‌ಎಸಿ ಸಮೀಪ ಮಿಲಿಟರಿ ಮೂಲಸೌಕರ್ಯವನ್ನು ನಿರ್ಮಿಸುವುದನ್ನು ನಾವು ನೋಡಿದ್ದೇವೆ” ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಎರಡೂ ದೇಶಗಳ ಸೈನಿಕರು ಘರ್ಷಣೆ ನಡೆಸಿದ್ದು, ಎರಡೂ ಕಡೆ ಸಣ್ಣಪುಟ್ಟ ಗಾಯಗಳಾಗಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top