News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಈ ವರ್ಷದಿಂದಲೇ 5 ಮತ್ತು 8ನೇ ತರಗತಿಗೆ ವಾರ್ಷಿಕ ಪರೀಕ್ಷೆ

ಬೆಂಗಳೂರು: 2022-23ನೇ ಸಾಲಿನ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.

ಈ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಲಿದ್ದು, ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ವಾರ್ಷಿಕ ಪರೀಕ್ಷೆ ಇಲ್ಲದೇ ಇರುವ ಕಾರಣ ಮಕ್ಕಳ ಕಲಿಕೆ ಯಾವ ಮಟ್ಟದಲ್ಲಿದೆ?, ಅವರ ಕೊರತೆಗಳೇನು?, ಯಾವ ವಿಷಯದಲ್ಲಿ ಅವರಿಗೆ ಹಿನ್ನಡೆ ಉಂಟಾಗಿದೆ?, ಅವುಗಳ ನಿವಾರಣೆಗೆ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕಾಗಿ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಸಾಮರ್ಥ್ಯವನ್ನು ಏಕರೂಪದ ಸಾಧನ ಮತ್ತು ತಂತ್ರ ಬಳಸಿ ಮೌಲ್ಯಮಾಪನ ನಡೆಸುವ ಅಗತ್ಯವಿದೆ ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.

ಈಗಾಗಲೇ ಅರ್ಧ ಶೈಕ್ಷಣಿಕ ವರ್ಷ ಪೂರ್ಣಗೊಂಡಿದೆ ಹೀಗಾಗಿ ಉಳಿದ ಅರ್ಧ ವರ್ಷದ ಪಠ್ಯ ವಸ್ತುವನ್ನು ಆಧರಿಸಿ ಐದು ಮತ್ತು ಎಂಟನೇ ತರಗತಿಗೆ 50 ಅಂಕಗಳ ಎರಡು ಗಂಟೆ ಅವಧಿಯ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಇದರಲ್ಲಿ 40 ಅಂಕಗಳಿಗೆ ಲಿಖಿತ, 10 ಅಂಕಗಳಿಗೆ ಮೌಖಿಕ ಪರೀಕ್ಷೆ ಇರಲಿದೆ. ತಾಲೂಕು ಮಟ್ಟದಲ್ಲಿ ಮೌಲ್ಯಮಾಪನ ನಡೆಯಲಿದೆ ಎಂದು ತಿಳಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top