News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಡಿಎಂಕೆ ಕುಟುಂಬ ರಾಜಕೀಯ: ಉದಯನಿಧಿ ಸ್ಟಾಲಿನ್‌ಗೆ ಸಚಿವ ಸ್ಥಾನ

ಚೆನ್ನೈ: ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷದ ಕುಟುಂಬ ರಾಜಕೀಯಕ್ಕೆ ಮತ್ತೊಂದು ಪೀಳಿಗೆ ಸೇರ್ಪಡೆಗೊಂಡಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯ ನಿಧಿ ಸ್ಟಾಲಿನ್ ಅವರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇಂದು ಬೆಳಗ್ಗೆ ರಾಜ್ಯಪಾಲ ಆರ್.ಎನ್ ರವಿ ಅವರು ಉದಯ ನಿಧಿ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ವರದಿಗಳ ಪ್ರಕಾರ ಅವರು ಕ್ರೀಡಾ ಸಚಿವರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಉದಯ ನಿಧಿ ಅವರು ಚೆನ್ನೈನ ಚೆಪಾಕ್ ತಿರುವಲ್ಲಿಕೆನಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಗೊಂಡಿದ್ದಾರೆ.

ಮೊದಲ ಬಾರಿಗೆ ಶಾಸಕರಾದ ಅವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಡಿಎಂಕೆ ಪಕ್ಷದ ಕುಟುಂಬ ರಾಜಕಾರಣವನ್ನು ಪ್ರತಿಬಿಂಬಿಸುತ್ತದೆ. ಎಂಕೆ ಸ್ಟಾಲಿನ್ ಅವರು ತಮ್ಮ ಉತ್ತರಾಧಿಕಾರಿಯಾಗಿ ಉದಯ ನೀತಿಯವರನ್ನು ಮುನ್ನಲೆಗೆ ತರುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಕರುಣಾನಿಧಿ ಅವರ ನಿಧನದ ಬಳಿಕ ಡಿಜಂಕೆ ಪಕ್ಷದ ಸಂಪೂರ್ಣ ಹಿಡಿತವನ್ನು ಸ್ಟಾಲಿನ್ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top