News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶದಲ್ಲಿ 5 ವರ್ಷದೊಳಗಿನ ಮಕ್ಕಳ ಆರೋಗ್ಯ ಸುಧಾರಿಸಿದೆ: ಕೇಂದ್ರ

ನವದೆಹಲಿ: ದೇಶದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಆರೋಗ್ಯ ಸುಧಾರಿಸಿದೆ, ಶಿಶುಗಳ ಮರಣ ಪ್ರಮಾಣ ಕಡಿಮೆಯಾಗಿದೆ ಮತ್ತು ಅಪೌಷ್ಟಿಕತೆಯಿಂದ ಯಾವುದೇ ಮಕ್ಕಳ ಸಾವು ಸಂಭವಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರ ಇಂದು ಮಾಹಿತಿ ನೀಡಿದೆ.

ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು. “2019 ಮತ್ತು 2021 ರ ನಡುವಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಇತ್ತೀಚಿನ ವರದಿಯ ಪ್ರಕಾರ, 5 ವರ್ಷದೊಳಗಿನ ಮಕ್ಕಳ ಪೌಷ್ಟಿಕಾಂಶದ ಸೂಚಕಗಳು 2015-16 ಕ್ಕೆ ಹೋಲಿಸಿದರೆ ಸುಧಾರಿಸಿದೆ. ಬೆಳವಣಿಗೆ ಕುಂಠಿತವಾಗುವುದು, ತೂಕ ಕ್ಷೀಣಿಸುವಿಕೆ ಮತ್ತು ಕಡಿಮೆ ತೂಕ ಕೂಡ ಕಡಿಮೆಯಾಗಿದೆ” ಎಂದಿದ್ದಾಎಎ.

ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾದ (RGI) ಮಾದರಿ ನೋಂದಣಿ ವ್ಯವಸ್ಥೆ (SRS) ಪ್ರಕಾರ, 5 ವರ್ಷದೊಳಗಿನ ರಾಷ್ಟ್ರೀಯ ಮಟ್ಟದಲ್ಲಿ ಮಕ್ಕಳ ಮರಣವು 2015 ರಲ್ಲಿ 1000 ಜೀವಂತ ಜನನಗಳಿಗೆ 43 ಇತ್ತು,  2020 ರಲ್ಲಿ 1000 ಜೀವಂತ ಜನನಗಳಿಗೆ 32 ಕ್ಕೆ ಇಳಿದಿದೆ ಎಂದು ಸ್ಮೃತಿ ಇರಾನಿ ಮಾಹಿತಿ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top