News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 2nd February 2023


×
Home About Us Advertise With s Contact Us

ಶೌಚಾಲಯ ನಿರ್ಮಾಣದಿಂದಾಗಿ ಹೆಣ್ಣು ಮಕ್ಕಳ ಶಾಲೆ ಬಿಡುವ ಪ್ರಮಾಣ ಇಳಿಕೆ: ಕೇಂದ್ರ

ನವದೆಹಲಿ: 2014ರಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಶಿಕ್ಷಣ ಕ್ಷೇತ್ರ ಬದಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.

ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಮಾಂಡವಿಯಾ, ಕಳೆದ ಎಂಟು ವರ್ಷಗಳಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ ದ್ವಿಗುಣಗೊಂಡಿದೆ. 2014ರಲ್ಲಿ ಕೇವಲ 53 ಸಾವಿರ ಎಂಬಿಬಿಎಸ್ ಸೀಟುಗಳಿದ್ದು ಈಗ 96 ಸಾವಿರಕ್ಕೆ ಏರಿಕೆಯಾಗಿದ್ದು, ಶೇ.87ರಷ್ಟು ಪ್ರಗತಿ ದಾಖಲಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.

ಪಿಜಿ ಸೀಟುಗಳು ಕೂಡ 2014 ರಲ್ಲಿ ಇದ್ದ 31 ಸಾವಿರ ಸೀಟುಗಳಿಂದ 63 ಸಾವಿರಕ್ಕೆ 105% ರಷ್ಟು ಏರಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದರು.

ಶಾಲೆಗಳಲ್ಲಿ ಶೌಚಾಲಯ ನಿರ್ಮಾಣದಿಂದಾಗಿ ಹೆಣ್ಣು ಮಕ್ಕಳ ಶಾಲೆ ಬಿಡುವ ಪ್ರಮಾಣ ಶೇ.70ರಿಂದ 13ಕ್ಕೆ ಇಳಿಕೆಯಾಗಿದೆ ಎಂದು ಡಾ.ಮಾಂಡವಿಯಾ ಹೇಳಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top