News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

7 ವರ್ಷಗಳಲ್ಲಿ 6 ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿ: ಕೇಂದ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ದೇಶದಲ್ಲಿ ವಾಯು ಯಾನ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಕ್ರಮಗಳನ್ನು ಕೈಗೊಂಡಿದೆ. ವಿಮಾನ ನಿಲ್ದಾಣಗಳ ಅಭಿವೃದ್ಧಿ ಕೂಡ ಇದರಲ್ಲಿ ಸೇರಿದೆ.

ಅಸ್ತಿತ್ವದಲ್ಲಿರುವ ಎರಡು ವಿಮಾನ ನಿಲ್ದಾಣಗಳನ್ನು ಒಳಗೊಂಡಂತೆ ಕಳೆದ ಏಳು ವರ್ಷಗಳಲ್ಲಿ ಸರ್ಕಾರವು ದೇಶದಲ್ಲಿ 6 ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಿದೆ ಎಂದು ಸಂಸತ್ತಿಗೆ ಮಾಹಿತಿ ನೀಡಲಾಗಿದೆ.

ಆರು ವಿಮಾನ ನಿಲ್ದಾಣಗಳ ಪೈಕಿ ನಾಲ್ಕು ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಗಳು- ಕೇರಳದ ಕಣ್ಣೂರು, ಮಹಾರಾಷ್ಟ್ರದ ಶಿರಡಿ, ಉತ್ತರ ಪ್ರದೇಶದ ಕುಶಿನಗರ, ಮತ್ತು ಗೋವಾದ ಮೋಪಾ. ಎರಡು ಅಸ್ತಿತ್ವದಲ್ಲಿದ್ದ ವಿಮಾನ ನಿಲ್ದಾಣಗಳಾದ ವಿಜಯವಾಡ ಮತ್ತು ಆಂಧ್ರಪ್ರದೇಶದ ತಿರುಪತಿ ವಿಮಾನನಿಲ್ದಾಣವನ್ನು ಅಭಿವೃದ್ಧಿಪಡಿಸಿದೆ.

ನಿನ್ನೆ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ರಾಜ್ಯ ಸಚಿವ ಜನರಲ್ ವಿ.ಕೆ. ಅವರು ಈ ಮಾಹಿತಿ ನೀಡಿದ್ದಾರೆ.

2014ಕ್ಕಿಂತ ಮೊದಲು ದೇಶದಲ್ಲಿ 24 ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿದ್ದವು ಎಂದು ಹೇಳಿದ ಸಚಿವರು, ಆಂಧ್ರಪ್ರದೇಶದ ವಿಜಯವಾಡ ಮತ್ತು ತಿರುಪತಿ ಎಂಬ ಎರಡು ವಿಮಾನ ನಿಲ್ದಾಣಗಳನ್ನು 2017 ರಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲಾಯಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top