News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಯೋತ್ಪಾದಕರ ಪರ ಒಲವಿರುವ ಕಾಂಗ್ರೆಸ್‌ಗೆ ಜನರಿಂದಲೇ ಉತ್ತರ: ನಳಿನ್‍

ಬೆಂಗಳೂರು: ಕಾಂಗ್ರೆಸ್ ರಾಜ್ಯಾಧ್ಯಕ್ಷ (ಕೆಪಿಸಿಸಿ) ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬೈಯ್ಯುವ ಭರದಲ್ಲಿ ಭಯೋತ್ಪಾದಕರ ಮೇಲಿನ ತಮ್ಮ ಪ್ರೇಮವನ್ನು ಜಗಜ್ಜಾಹೀರು ಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ದೇಶದ ಭದ್ರತೆ, ಏಕತೆ ವಿಚಾರದಲ್ಲಿ ಕಾಂಗ್ರೆಸ್ ಕಣ್ಣಾಮುಚ್ಚಾಲೆ ಆಡುತ್ತಿರುವುದು ಇದೇ ಮೊದಲಲ್ಲ. ಮಂಗಳೂರಿನ ಕುಕ್ಕರ್ ಬಾಂಬ್ ವಿಚಾರ ಭಯೋತ್ಪಾದನೆಗೆ ಸಮಾನವಲ್ಲ ಎಂದು ಮಾತನಾಡುವ ಇವರು ಅಧಿಕಾರಕ್ಕೆ ಬರದಂತೆ ಜನತೆ ತಕ್ಕ ಪಾಠ ಕಲಿಸುತ್ತಾರೆ; ಅಲ್ಲದೆ ಪೂರ್ಣಪ್ರಮಾಣದಲ್ಲಿ ಮೂಲೆಗುಂಪು ಮಾಡುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಾಟ್ಲಾ ಹೌಸ್ ಪ್ರಕರಣದಲ್ಲಿ ಕಾಂಗ್ರೆಸ್‍ನ ಅಂದಿನ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿಯವರು ಉಗ್ರರನ್ನು ಎನ್‍ಕೌಂಟರ್ ಮಾಡಿದ್ದಕ್ಕಾಗಿ ಅತ್ತಿದ್ದು ನೆನಪಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಹಿಂದೊಮ್ಮೆ ನೆಹರೂ ಮತದ ಲಾಭಕ್ಕಾಗಿ ಉರ್ದುವಿನಲ್ಲಿ ತನ್ನ ಮದುವೆ ಆಮಂತ್ರಣಪತ್ರವನ್ನು ಮುದ್ರಿಸಿದ್ದರು. ರಾಜೀವ್ ಗಾಂಧಿ ಕೂಡ ಭಿಂದ್ರನ್‍ವಾಲೆಯನ್ನು ಒಬ್ಬ ಸಂತ ಎಂದು ಕರೆದಿದ್ದರು ಎಂದು ನೆನಪಿಸಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆ ಉತ್ತುಂಗ ಸ್ಥಿತಿಯಲ್ಲಿತ್ತು. ಕಾಂಗ್ರೆಸ್ ಪಕ್ಷ ಭಯೋತ್ಪಾದಕರಿಗೆ ಬೆಂಬಲ ಕೊಡುವ ಮೂಲಕ ಮತಬ್ಯಾಂಕ್ ರಾಜಕೀಯ ಮಾಡುತ್ತಿದೆ. ಇದನ್ನು ಜನರು ಅರ್ಥ ಮಾಡಿಕೊಂಡಿದ್ದು, ಎಲ್ಲೆಡೆ ಅವರ ವಿರುದ್ಧ ಜನಾಭಿಪ್ರಾಯ ಮೂಡಿದೆ ಎಂದು ತಿಳಿಸಿದ್ದಾರೆ.

ದೇಶದ ಭದ್ರತೆ ಮತ್ತು ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯ ಚುನಾವಣೆ, ಗುಜರಾತ್ ಚುನಾವಣೆಯಲ್ಲಿ ಜನರು ಬಿಜೆಪಿ ಪರ ನಿಂತಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೇರುವ ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ಅಧ್ಯಕ್ಷರಿಗೆ ಅದು ತಿರುಕನ ಕನಸು ಎಂಬುದರ ಅರಿವಾಗಿದೆ. ಆದ್ದರಿಂದಲೇ ಅವರು ಭಯೋತ್ಪಾದಕರ ಪರ ನಿಂತು ತಮ್ಮ ತುಷ್ಟೀಕರಣ ನೀತಿಯನ್ನು ಮುಂದುವರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಮ್ಮ ದೇಶದ ಸೈನಿಕರ ಪರ ನಿಲ್ಲದೆ, ರಕ್ಷಣಾ ವಿಚಾರದಲ್ಲೂ ಸಾಕ್ಷಿ ಕೇಳುವ ಮಟ್ಟಕ್ಕೆ ಕಾಂಗ್ರೆಸ್ ತಲುಪಿದೆ. ಇದೀಗ ಭಯೋತ್ಪಾದಕರ ಪರ ನಿಂತು ತನ್ನ ಲಜ್ಜೆಗೇಡಿ ವರ್ತನೆಯನ್ನು ಮುಂದುವರಿಸಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಭಯೋತ್ಪಾದನೆಯಂಥ ವಿಚಾರದಲ್ಲೂ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ಕಾಂಗ್ರೆಸ್ಸಿಗರ ಹೇಯ ಮನಸ್ಥಿತಿಯನ್ನು ಖಂಡಿಸುವುದಾಗಿ ಅವರು ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top