News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 2nd February 2023


×
Home About Us Advertise With s Contact Us

ಸತತ 3ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ‌ಭಾರತದ ಅಂಧರ ತಂಡ

ಬೆಂಗಳೂರು: ಅಂಧರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ ಗೆಲುವು ಸಾಧಿಸಿದೆ. ಈ ಮೂಲಕ ಮೂರನೇ ಬಾರಿಗೆ ಭಾರತೀಯ ಅಂಧರ ಕ್ರಿಕೆಟ್ ತಂಡ ಪ್ರಶಸ್ತಿ ಗೆದ್ದು ಹ್ಯಾಟ್ರಿಕ್ ಸಾಧನೆಯನ್ನು ಮಾಡಿದೆ.

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಅದರಂತೆ ಭಾರತ 20 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 277 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿತು.

ಭಾರತದ ಪರ ಸುನಿಲ್ ರಮೇಶ್ ಔಟ್ ಆಗದೆ 136, ಅಜಯ್ ಕುಮಾರ್ ರೆಡ್ಡಿ ಔಟ್ ಆಗದೆ 100 ಶತಕ ಸಿಡಿಸಿ ಸಂಭ್ರಮಿಸಿದರು. 278 ರನ್ ಗಳ ಬೃಹತ್ ಮೊತ್ತ ಬೆನ್ನೆತ್ತಿದ ಬಾಂಗ್ಲಾ 20 ಓವರ್ ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 157 ರನ್ ಗಳಿಸಿ ಸೋಲು ಕಂಡಿತು. ಇದರೊಂದಿಗೆ ಭಾರತ 120 ರನ್‌ಗಳ ಅಂತರದಿಂದ ಗೆಲುವಿನ ನಗೆ ಬೀರಿತು.

ಈ ಹಿಂದೆ ಎರಡು ಆವೃತ್ತಿಗಳಲ್ಲಿ ಭಾರತ ತಂಡ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು. 2012ರಲ್ಲಿ ಪಾಕಿಸ್ತಾನವನ್ನು ಮಣಿಸಿ ಪ್ರಶಸ್ತಿ ಗೆದ್ದಿತ್ತು 2017ರಲ್ಲಿ ಪಾಕಿಸ್ತಾನದ ವಿರುದ್ಧವೇ ಜಯಗಳಿಸಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top