News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

10 ವರ್ಷದ ನಂತರ ರಾಷ್ಟ್ರ ಮಟ್ಟದ ಯುವ ಜನೋತ್ಸವ ಆಯೋಜಿಸಲಿದೆ ಕರ್ನಾಟಕ

ಚಿಕ್ಕಮಗಳೂರು: 10 ವರ್ಷದ ಬಳಿಕ ರಾಷ್ಟ್ರ ಮಟ್ಟದ ಯುವ ಜನೋತ್ಸವ ಕರ್ನಾಟಕದಲ್ಲೇ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

2022-23 ನೇ ಸಾಲಿನ ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಕುವೆಂಪು ಕಲಾ ಮಂದಿರದಲ್ಲಿ ಸಚಿವ ಡಾ.ನಾರಾಯಣಗೌಡ ಅವರು, ಶಾಸಕ ಸಿಟಿ ರವಿ ಅವರು ಚಾಲನೆ ನೀಡಿದರು.

ಯುವಕರಿಗಾಗಿ ನೂತನ ಯುವನೀತಿ, ಸ್ವಾಮಿ ವಿವೇಕಾನಂದ ಸ್ವಸಹಾಯ ಸಂಘ ಸೇರಿದಂತೆ ಹತ್ತಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ದೇಶದಲ್ಲೇ ಮೊದಲನೇ ಬಾರಿಗೆ ಯುವನೀತಿಯನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ. ಯುವಕರು ತಮ್ಮ ಸ್ವಂತ ಕಾಲ ಮೇಲೆ ನಿಲ್ಲಲು ಅಗತ್ಯವಿರುವ ಹಲವಾರು ಯೋಜನೆಗಳನ್ನು ರೂಪಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯತ್‌ಗೆ ಎರಡರಂತೆ ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳನ್ನು ರಚಿಸಲಾಗುತ್ತಿದೆ. ಯುವ ಸಂಘಗಳಿಗೆ 10 ಸಾವಿರ ಸುತ್ತುನಿಧಿ, 5 ಲಕ್ಷದವರೆಗೂ ಲೋನ್, 1 ಲಕ್ಷ ಸಬ್ಸಿಡಿ ನೀಡಲಾಗುತ್ತದೆ. ಇದರ ಜೊತೆಗೆ ಯುವ ಜನೋತ್ಸವದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗುವವರ ಬಹುಮಾನ ಮೊತ್ತವನ್ನು ಹೆಚ್ಚಿಸಲಾಗಿದೆ. ಯುವ ಪ್ರತಿಭೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಬಹುಮಾನದ ಮೊತ್ತ ಹೆಚ್ಚಳ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಗೆ ಕ್ರೀಡಾ ಇಲಾಖೆಯಿಂದ ಸುಮಾರು 23 ಕೋಟಿಯಷ್ಟು ಅನುದಾನ ನೀಡಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಇದೇ ರೀತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ, ಯುವ ಜನರಿಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top