News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸುವರ್ಣಸೌಧದಲ್ಲಿ ಸಾವರ್ಕರ್ ಸೇರಿದಂತೆ 7 ಮಹನೀಯರ ಭಾವಚಿತ್ರ ಅನಾವರಣ

ಬೆಳಗಾವಿ: ರಾಜ್ಯ ಸರ್ಕಾರ ಇಂದು ಸುವರ್ಣಸೌಧದ ಸಭಾಂಗಣದಲ್ಲಿ ವೀರ ಸಾವರ್ಕರ್ ಸೇರಿದಂತೆ ಏಳು ಮಹಾನ್‌ ನಾಯಕರ ಭಾವಚಿತ್ರವನ್ನು ಅನಾವರಣ ಮಾಡಿದೆ.

ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಅನಾವರಣ ಮಾಡಲಾಗಿದೆ.

ಸಾವರ್ಕರ್, ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೇತಾಜಿ, ಸರ್ದಾರ್ ವಲ್ಲಭ್ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದ, ಬಸವಣ್ಣರ ಫೋಟೋಗಳನ್ನೂ ಈ ವೇಳೆ ಅನಾವರಣ ಮಾಡಲಾಗಿದೆ.

ವೀರ ಸಾವರ್ಕರ್ ಅವರ ಫೋಟೋವನ್ನು ವಿಧಾನಸಭೆಯಲ್ಲಿ ಅನಾವರಣಗೊಳಿಸಿದ್ದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ಪ್ರತಿಭಟನೆ ನಡೆಸುತ್ತಿದೆ.

ಇನ್ನೊಂದೆಡೆ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಮಹಾತ್ಮಗಾಂಧಿ, ಅಂಬೇಡ್ಕರ್‌ ಪ್ರತಿಮೆಗಳನ್ನು ಸುವರ್ಣಸೌಧದಲ್ಲಿ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಇದೇ ಅಧಿವೇಶನದಲ್ಲಿ ಮೂರ್ತಿ ಸ್ಥಾಪನೆಗೆ ಶಂಕು ಸ್ಥಾಪನೆ ನೆರವೇರುವ ನಿರೀಕ್ಷೆ ಇದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top