News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭ: ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ರಾಜ್ಯ ವಿಧಾನಮಂಡಲ ಅಧಿವೇಶನ ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಆರಂಭವಾಗಿದೆ.‌ ಒಟ್ಟು 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ.

ಈಗಾಗಲೇ ಕಲಾಪ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ವಿಧಾನಸಭೆಯ ಹಾಲ್ ನಲ್ಲಿ ಮೊದಲು ಸ್ವಾಮಿ ವಿವೇಕಾನಂದ, ಬಸವಣ್ಣ, ಮಹಾತ್ಮಾ ಗಾಂಧಿಜಿ, ವೀರ ಸಾವರ್ಕರ್, ಡಾ.ಬಿ.ಆರ್ ಅಂಬೇಡ್ಕರ್ ಸೇರಿದಂತೆ ಹಲವು ಮಹನೀಯರ ಭಾವಚಿತ್ರಗಳನ್ನು ಸಿಎಂ ಬೊಮ್ಮಾಯಿ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅನಾವರಣ ಮಾಡಿದರು.

ಬಳಿಕ ವಿಧಾನಸಭೆ ಕಲಾಪ ಆರಂಭವಾಗಿದ್ದು, ಕಲಾಪದಲ್ಲಿ ಮೊದಲಿಗೆ ಅಗಲಿದ ಗಣ್ಯರಾದ ಆನಂದ್ ಮಹಾಮನಿ, ಮುಲಾಯಂ ಸಿಂಗ್ ಯಾದವ್, ಕುಂಬಳೆ ಸುಂದರ್ ರಾವ್, ಶ್ರೀಶೈಲಪ್ಪ ಬಿದರೂರು, ಜಬ್ಬಾರ್ ಖಾನ್ ಹೊನ್ನಳ್ಳಿ ಸೇರಿದಂತೆ ಹಲವು ಗಣ್ಯರಿಗೆ ಸಂತಾಪ ಸೂಚಿಸಲಾಯಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top