News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮುಂದಿನ 5 ವರ್ಷದಲ್ಲಿ ಏರ್‌ಪೋರ್ಟ್, ವಾಟರ್ ಏರೋಡ್ರೋಮ್‌, ಹೆಲಿಪೋರ್ಟ್‌ಗಳ ಸಂಖ್ಯೆ 200 ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ವಾಯು ಸಂಪರ್ಕವನ್ನು ಹೆಚ್ಚಿಸಲು ಮುಂದಿನ ಐದು ವರ್ಷಗಳಲ್ಲಿ ಕೇಂದ್ರವು ವಿಮಾನ ನಿಲ್ದಾಣಗಳು, ವಾಟರ್ ಏರೋಡ್ರೋಮ್‌ಗಳು ಮತ್ತು ಹೆಲಿಪೋರ್ಟ್‌ಗಳ ಸಂಖ್ಯೆಯನ್ನು 200 ಕ್ಕೆ ಹೆಚ್ಚಿಸಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಹೇಳಿದ್ದಾರೆ.

ಪ್ರಸ್ತುತ ದೇಶದಲ್ಲಿ ವಿಮಾನ ನಿಲ್ದಾಣಗಳು, ವಾಟರ್ ಏರೋಡ್ರೋಮ್‌ಗಳು ಮತ್ತು ಹೆಲಿಪೋರ್ಟ್‌ಗಳ ಸಂಖ್ಯೆ 145 ಆಗಿದೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 2013-14ರ ವರೆಗೆ ದೇಶವು ಕೇವಲ 74 ವಿಮಾನ ನಿಲ್ದಾಣಗಳನ್ನು ಹೊಂದಿತ್ತು ಮತ್ತು ಕಳೆದ ಎಂಟು ವರ್ಷಗಳಲ್ಲಿ ವಿಮಾನ ನಿಲ್ದಾಣಗಳು, ವಾಟರ್ ಏರೋಡ್ರೋಮ್‌ಗಳು ಮತ್ತು ಹೆಲಿಪೋರ್ಟ್‌ಗಳ ಸಂಖ್ಯೆ 145 ಕ್ಕೆ ಏರಿದೆ ಎಂದು  ಹೇಳಿದರು.

ಅಲ್ಲದೇ ವಿಮಾನಗಳ ಸಂಖ್ಯೆ ಹಿಂದಿನ 400 ರಿಂದ ಪ್ರಸ್ತುತ 700 ಕ್ಕೆ ಏರಿಕೆಯಾಗಿದೆ. ಪ್ರತಿ ವರ್ಷ ಸುಮಾರು 100 ವಿಮಾನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ ಮತ್ತು ಮುಂದಿನ ಐದು ವರ್ಷಗಳಲ್ಲಿ ಈ ಸಂಖ್ಯೆ 1200 ತಲುಪುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top