News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಂಸತ್ತಿನಲ್ಲಿ ತೀವ್ರ ಗದ್ದಲಕ್ಕೆ ಕಾರಣವಾದ ಖರ್ಗೆ ಹೇಳಿಕೆ

ನವದೆಹಲಿ: ರಾಜಸ್ಥಾನದ ಅಲ್ವಾರ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ ಟೀಕೆಗಳ ಬಗ್ಗೆ ಮಂಗಳವಾರ ರಾಜ್ಯಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಜಟಾಪಟಿ ನಡೆದಿದೆ. ಬಿಜೆಪಿ ಸದಸ್ಯರು ಖರ್ಗೆ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಆದರೆ, ಖರ್ಗೆ ಅವರು ಕ್ಷಮೆಯಾಚನೆಗೆ ನಿರಾಕರಿಸಿದ್ದು, ಸಂಸತ್ತಿನ ಹೊರಗೆ ಟೀಕೆ ಮಾಡಲಾಗಿದ್ದು, ಸದನದಲ್ಲಿ ಚರ್ಚೆ ನಡೆಸಬಾರದು ಎಂದಿದ್ದಾರೆ.

“ಕಾಂಗ್ರೆಸ್ ದೇಶಕ್ಕಾಗಿ ಕೆಲಸ ಮಾಡಿದೆ. ಸ್ವಾತಂತ್ರ್ಯ ಪಡೆಯಲು ಸಹಾಯ ಮಾಡಿದೆ. ನಮ್ಮ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ಬಿಜೆಪಿ ನಾಯಕರು ದೇಶಕ್ಕಾಗಿ ಒಂದು “ನಾಯಿಯನ್ನು ಸಹ ಕಳೆದುಕೊಂಡಿಲ್ಲ” ಎಂಬ ಖರ್ಗೆಯವರ ಹೇಳಿಕೆ ಸಂಸತ್ತಿನಲ್ಲಿ ತೀವ್ರ ಗದ್ದಲವನ್ನು ಸೃಷ್ಟಿಸಿದೆ.

ಈ ಹೇಳಿಕೆಯನ್ನು ಇಂದು ಸಂಸತ್ತಿನಲ್ಲಿ ಉಭಯ ಸದನಗಳಲ್ಲಿ ಪ್ರಸ್ತಾಪಿಸಿದ ಬಿಜೆಪಿ ನಾಯಕರು ಖರ್ಗೆ ಕ್ಷಮೆಯಾಚಿಸುವಂತೆ ಆಗ್ರಹಿಸಿದರು.

“ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಆಕ್ಷೇಪಾರ್ಹ ಭಾಷೆ ಬಳಸುವ ಮೂಲಕ ಸುಳ್ಳು ಹರಡಲು ಪ್ರಯತ್ನಿಸಿದ್ದಾರೆ. ಅಲ್ವಾರ್ ನಲ್ಲಿ ಆಕ್ಷೇಪಾರ್ಹ ಭಾಷೆ ಬಳಸಿದ್ದಕ್ಕಾಗಿ ಅವರು ಕ್ಷಮೆಯಾಚಿಸಬೇಕು” ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು, ಸಂಸತ್ತಿನ ಹೊರಗೆ ಈ ಹೇಳಿಕೆಯನ್ನು ನೀಡಲಾಗಿದೆ ಎಂದು ಹೇಳಿದರು. ದೇಶದ 135 ಕೋಟಿ ಜನರು ನಮ್ಮನ್ನು ಗಮನಿಸುತ್ತಿದ್ದಾರೆ. ಯಾರೋ ಹೊರಗೆ ಏನೋ ಹೇಳಿರಬಹುದು. ನೀವು ಮಕ್ಕಳಲ್ಲ ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top