News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವರ್ಷದೊಳಗೆ ವಿವಿಧ ಇಲಾಖೆಗಳಲ್ಲಿನ 1 ಲಕ್ಷ ಖಾಲಿ ಹುದ್ದೆ ಭರ್ತಿ ಮಾಡಲಾಗುವುದು: ಸಿಎಂ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.5 ಲಕ್ಷ ಹುದ್ದೆಗಳ ಪೈಕಿ 1 ಲಕ್ಷ ಹುದ್ದೆಗಳನ್ನು ವರ್ಷದೊಳಗೆ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಘೋಷಣೆ ಮಾಡಿದ್ದಾರೆ.

ಖಾಲಿ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಿಕೊಳ್ಳಲು ಸೂಚನೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇಂದು ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಸಿಎನ್ ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಸರ್ಕಾರದಲ್ಲಿ 7.60 ಲಕ್ಷ ಮಂಜೂರಾದ ಹುದ್ದೆ ಇದೆ. ಇದರಲ್ಲಿ 2.53 ಲಕ್ಷ ಹುದ್ದೆಗಳು ಬಾಕಿ ಇದೆ. ಗ್ರೂಪ್ ಸಿ ಮತ್ತು ದರ್ಜೆಯ ಎಲ್ಲಾ ಹುದ್ದೆಗಳನ್ನು ಗುತ್ತಿಗೆ ಆಧಾರವಾಗಿ ತೆಗೆದುಕೊಂಡಿದ್ದೇವೆ. ಎ ಮತ್ತು ಬಿ ವರ್ಗದಲ್ಲಿ ಹೆಚ್ಚುವರಿ ಜವಾಬ್ದಾರಿ ನೀಡಿ ಕೆಲವರಿಂದ ನಿರ್ವಹಣೆ ಮಾಡಿಸಲಾಗುತ್ತಿದೆ. ಅಗತ್ಯ ಹುದ್ದೆಗಳ ಭರ್ತಿ ಯಾವುದು ಎಂದು ತಿಳಿಸುವಂತೆ ಇಲಾಖೆಗಳಿಗೆ ಸೂಚಿಸಿದ್ದೇನೆ. ಒಂದು ಲಕ್ಷ ಹುದ್ದೆಗಳನ್ನು ನಮ್ಮ ಸರ್ಕಾರ ಮುಂದಿನ ಒಂದು ವರ್ಷದಲ್ಲಿ ಭರ್ತಿ ಮಾಡಲಿದೆ. ಯಾವ ಇಲಾಖೆಯಲ್ಲಿ ತುರ್ತು ಅವಶ್ಯಕತೆ ಇದೆ ನೋಡಿ ಭರ್ತಿ ಮಾಡುವ ಕೆಲಸ ಮಾಡಲಾಗುತ್ತದೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top