News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೋವಿಡ್‌ ಆತಂಕ: ಉನ್ನತ ಮಟ್ಟದ ಸಭೆ ನಡೆಸಿದ ಮೋದಿ

ನವದೆಹಲಿ: ಚೀನಾದಲ್ಲಿ ಭಾರಿ ಕಳವಳ ಮೂಡಿಸಿರುವ ಓಮಿಕ್ರಾನ್‌ ಸಬ್ ವೇರಿಯೆಂಟ್‌ನ ನಾಲ್ಕು ಪ್ರಕರಣಗಳು ಭಾರತದಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಸಚಿವರು ಮತ್ತು ಉನ್ನತ ಅಧಿಕಾರಿಗಳ ಜೊತೆ‌ ಸಭೆ‌ ನಡೆಸಿದ್ದಾರೆ.

ಸಭೆಯ ನಂತರ, ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಪಾಲಿಸಲು ಕರೆ‌ನೀಡುವ ಸಾಧ್ಯತೆ ಇದೆ. ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಚರಣೆಗಳಲ್ಲಿ ಜನಸಂದಣಿಯನ್ನು ತಡೆಯಲು ರಾಜ್ಯಗಳಿಗೆ ಸೂಚನೆಯನ್ನು ನೀಡುವ ಸಾಧ್ಯತೆಯಿದೆ.

ವಿದೇಶದಿಂದ ಬರುವವರ ಪರೀಕ್ಷೆಯನ್ನು ಸರ್ಕಾರ ಈಗಾಗಲೇ ಆರಂಭಿಸಿದೆ. ಮುಂದಿನ ಏಳು ದಿನಗಳಲ್ಲಿ ಕ್ವಾರಂಟೈನ್ ಮತ್ತು ಪರೀಕ್ಷೆಗೆ ಮೂಲಸೌಕರ್ಯಗಳನ್ನು ಮರುಸ್ಥಾಪಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳುತ್ತಿವೆ.

BF.7 ರೂಪಾಂತರದ ಎರಡು ಪ್ರಕರಣಗಳು ಗುಜರಾತ್‌ನಲ್ಲಿ ಮತ್ತು ಎರಡು ಒಡಿಶಾದಲ್ಲಿ ವರದಿಯಾಗಿದೆ. ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್‌ನಲ್ಲಿ ಪ್ರಕರಣಗಳು ವರದಿಯಾಗಿವೆ.

ಗುಜರಾತ್‌ನಲ್ಲಿ ಇಬ್ಬರು ರೋಗಿಗಳಿಗೆ ಮನೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗಿದ್ದು, ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top