News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಂಜಯ್ ರಾವತ್ ದೇಶದ್ರೋಹಿ, ಚೀನೀ ಏಜೆಂಟ್: ಸಿಎಂ ಬೊಮ್ಮಾಯಿ

ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಶಿವಸೇನೆ ನಾಯಕ ಸಂಜಯ್ ರಾವತ್ ಅವರನ್ನು ‘ದೇಶದ್ರೋಹಿ’ ಮತ್ತು ‘ಚೀನೀ ಏಜೆಂಟ್’ ಎಂದು ಕರೆದಿದ್ದಾರೆ. ಅಲ್ಲದೇ ಅವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.

‘ಚೀನಾ ಭಾರತ ಪ್ರವೇಶಿಸಿದಂತೆ ಕರ್ನಾಟಕವನ್ನು ನಾವು ಪ್ರವೇಶಿಸುತ್ತೇವೆʼ ಎಂದು ರಾವತ್ ಇತ್ತೀಚಿಗೆ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದಕ್ಕೆ ಖಡಕ್‌ ಪ್ರತಿಕ್ರಿಯೆ ನೀಡಿರುವ ಸಿಎಂ, ರಾವತ್‌ ಒಬ್ಬ ಚೀನಿ ಏಜೆಂಟ್‌ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಜಯ್ ರಾವತ್ ದೊಡ್ಡ ಹೇಳಿಕೆ ನೀಡಿದ್ದಾರೆ. ಅವರು ಚೀನಾ ಪರವಾಗಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ರಾವತ್ ಅವರು ದೇಶದ ಏಕತೆ ಮತ್ತು ಸಮಗ್ರತೆಯನ್ನು ಹಾಳು ಮಾಡುತ್ತಿದ್ದಾರೆ ಮತ್ತು ಅವರು ಇದೇ ರೀತಿಯ ಹೇಳಿಕೆಗಳನ್ನು ನೀಡಿದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದ್ದಾರೆ.

“ಚೀನಾ ಹೇಗೆ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸಿದೆಯೋ ಹಾಗೆಯೇ ನಾವೂ ಕರ್ನಾಟಕ ಪ್ರವೇಶಿಸುತ್ತೇವೆ. ನಮಗೆ ಯಾರ ಅನುಮತಿಯೂ ಅಗತ್ಯವಿಲ್ಲ, ಸಮಸ್ಯೆಯನ್ನು ನಾವು ಚರ್ಚೆಯ ಮೂಲಕ ಪರಿಹರಿಸಲು ಬಯಸುತ್ತೇವೆ ಆದರೆ ಕರ್ನಾಟಕದ ಸಿಎಂ ಬೆಂಕಿ ಹಚ್ಚುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ದುರ್ಬಲ ಸರ್ಕಾರವಿದೆ. ಸಮಸ್ಯೆ ಬಗ್ಗೆ ಯಾವುದೇ ನಿಲುವು ತೆಗೆದುಕೊಳ್ಳುತ್ತಿಲ್ಲ” ಎಂದು ರಾವತ್‌ ಹೇಳಿದ್ದರು. ಅವರ ಹೇಳಿಕೆಗೆ ಕರ್ನಾಟದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top