News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

6 ದಿನ ಮುಂಚಿತವಾಗಿ ಇಂದು ಸಂಸತ್ತಿನ ಚಳಿಗಾಲದ ಅಧಿವೇಶನ ಅಂತ್ಯ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವು ನಿಗದಿಗಿಂತ ಆರು ದಿನ ಮುಂಚಿತವಾಗಿ ಇಂದು ಮುಕ್ತಾಯವಾಗಿದೆ. ಇಂದು ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ಓಂ ಬಿರ್ಲಾ ಅವರು ಈ ಘೋಷಣೆ ಮಾಡಿದ್ದಾರೆ.

ನಿನ್ನೆ ಲೋಕಸಭೆಯ ಶೂನ್ಯ ವೇಳೆಯಲ್ಲಿ, ಭಾರತ-ಚೀನಾ ಗಡಿ ಸಮಸ್ಯೆ ಕುರಿತು ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾಗ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಸದನವನ್ನು ಶುಕ್ರವಾರಕ್ಕೆ  ಮುಂದೂಡಿದ್ದರು. ಅದರಂತೆ ಇಂದು ಕಲಾಪ ಆರಂಭವಾದಾಗ ಮುಕ್ತಾಯದ ಘೋಷಣೆ ಹೊರ ಬಿದ್ದಿದೆ.

ಇದೇ ತಿಂಗಳ 7ರಂದು ಅಧಿವೇಶನ ಆರಂಭವಾಗಿದ್ದು, ಡಿಸೆಂಬರ್ 29ಕ್ಕೆ ಮುಕ್ತಾಯಗೊಳ್ಳಬೇಕಿತ್ತು. ಇದಕ್ಕೂ ಮೊದಲು, ಕ್ರಿಸ್‌ಮಸ್ ಮತ್ತು ಹೊಸ ವರ್ಷವನ್ನು ಗಮನದಲ್ಲಿಟ್ಟುಕೊಂಡು ಅಧಿವೇಶನವನ್ನು ಬೇಗ ಮುಗಿಸುವಂತೆ ಹಲವು ವಿರೋಧ ಪಕ್ಷದ ನಾಯಕರು ಒತ್ತಾಯಿಸಿದ್ದರು.

ಒಂದು ವಾರ ಮುಂಚಿತವಾಗಿಯೇ ಅಧಿವೇಶನ ಮುಕ್ತಾಯಗೊಳಿಸುವ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ಲೋಕಸಭೆಯ ವ್ಯವಹಾರ ಸಲಹಾ ಸಮಿತಿಯ ಸಭೆಯಲ್ಲಿ ಶಿಫಾರಸ್ಸು ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top