News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವಿಧಾನ ಪರಿಷತ್ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ

ಬೆಳಗಾವಿ: ವಿಧಾನ ಪರಿಷತ್ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಅವರು ಇಂದು ಆಯ್ಕೆಯಾಗಿದ್ದಾರೆ.

ಉಪ ಸಭಾಪತಿ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅರವಿಂದ ಅರಳಿ 26 ಮತ ಪಡೆದುಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕೋಟಾ ಶ್ರೀನಿವಾಸ್ ಪೂಜಾರಿ, ಎಸ್. ರುದ್ರೇಗೌಡ, ತಳವಾರ್ ಸಾಬಣ್ಣ, ಅರುಣ್ ಡಿಎಸ್ ಅವರು ಬಿಜೆಪಿಯಿಂದ ಎಂ.ಕೆ ಪ್ರಾಣೇಶ್ ಹೆಸರು ಉಪಸಭಾಪತಿ ಸ್ಥಾನಕ್ಕೆ ಪ್ರಸ್ತಾಪ ಮಾಡಿದರು.

ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಅರವಿಂದ ಕುಮಾರ್ ಅರಳಿ ಅವರ ಹೆಸರನ್ನು ಬಿ.ಕೆ. ಹರಿಪಸ್ರಾದ್  ಪ್ರಸ್ತಾಪ ಮಾಡಿದರು.

ಜೆಡಿಎಸ್ ಪಕ್ಷದಿಂದ ಯಾರು  ಮತ ಚಲಾಯಿಸಿಲ್ಲ.

ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಲಾಪದಲ್ಲಿಯೇ ನೂತನ ಉಪ ಸಭಾಪತಿಗಳ ಆಯ್ಕೆ ನಡೆದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top