News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2023ರ ಡಿಸೆಂಬರ್‌ವರೆಗೆ ಉಚಿತ ಆಹಾರ ಧಾನ್ಯ ವಿತರಣೆ ವಿಸ್ತರಿಸಿದ ಕೇಂದ್ರ

ನವದೆಹಲಿ: ಡಿಸೆಂಬರ್ 2023 ರವರೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ಸಿಗಲಿದೆ.

ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ಕೇಂದ್ರ ಸರ್ಕಾರ ಪ್ರಸ್ತುತ ಪ್ರತಿ ವ್ಯಕ್ತಿಗೆ ಐದು ಕೆಜಿ ಆಹಾರ ಧಾನ್ಯಗಳನ್ನು ಪ್ರತಿ ಕೆಜಿಗೆ 2-3 ರೂ.ಗೆ ಒದಗಿಸುತ್ತಿದೆ.

ಅಂತ್ಯೋದಯ ಅನ್ನ ಯೋಜನೆ(ಎಎವೈ) ಅಡಿಯಲ್ಲಿ ಬರುವ ಕುಟುಂಬಗಳು ತಿಂಗಳಿಗೆ 35 ಕೆಜಿ ಆಹಾರ ಧಾನ್ಯಗಳನ್ನು ಪಡೆಯುತ್ತವೆ. ಎನ್‌ಎಫ್‌ಎಸ್‌ಎ ಅಡಿಯಲ್ಲಿ ಬಡವರಿಗೆ ಕೆಜಿಗೆ 3 ರೂ.ಗೆ ಅಕ್ಕಿ ಮತ್ತು ಗೋಧಿಯನ್ನು ಕೆಜಿಗೆ 2 ರೂ.ಗೆ ನೀಡಲಾಗುತ್ತದೆ.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್, ಈ ಹಿಂದೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಖರೀದಿಸುತ್ತಿದ್ದ ಸುಮಾರು 81.35 ಕೋಟಿ ಫಲಾನುಭವಿಗಳು ಈಗ ಆಹಾರ ಧಾನ್ಯಗಳನ್ನು ಉಚಿತವಾಗಿ ಪಡೆಯುತ್ತಿದ್ದಾರೆ. ವರ್ಷಕ್ಕೆ ಸುಮಾರು 2 ಲಕ್ಷ ಕೋಟಿ ರೂಪಾಯಿಗಳ ಸಂಪೂರ್ಣ ವೆಚ್ಚವನ್ನು ಕೇಂದ್ರವು ಭರಿಸಲಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top