News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 8th February 2023


×
Home About Us Advertise With s Contact Us

ಚೀನಾ ಸೇರಿದಂತೆ 4 ದೇಶಗಳಿಂದ ಆಗಮಿಸುವವರಿಗೆ RT-PCR ಪರೀಕ್ಷೆ ಕಡ್ಡಾಯ

ನವದೆಹಲಿ: ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್‌ನಿಂದ ಬರುವ  ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಭಾರತವು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ.

ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು ಥಾಯ್ಲೆಂಡ್‌ನಿಂದ ಅಂತರರಾಷ್ಟ್ರೀಯ ಆಗಮನಕ್ಕೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶನಿವಾರ ಹೇಳಿದ್ದಾರೆ.

ಬಹು ರಾಷ್ಟ್ರಗಳಲ್ಲಿ ಕೋವಿಡ್-19 ಪ್ರಕರಣಗಳ ಉಲ್ಬಣದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, “ಚೀನಾ, ಜಪಾನ್, ಎಸ್. ಕೊರಿಯಾ, ಹಾಂಗ್ ಕಾಂಗ್ ಮತ್ತು ಥೈಲ್ಯಾಂಡ್‌ನಿಂದ ಅಂತರರಾಷ್ಟ್ರೀಯ ಆಗಮನಕ್ಕೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಆಗಮನದ ನಂತರ, ಈ ದೇಶಗಳಿಂದ ಯಾವುದೇ ಪ್ರಯಾಣಿಕರಿಗೆ ರೋಗಲಕ್ಷಣ ಕಂಡುಬಂದರೆ ಅಥವಾ ಕೋವಿಡ್ 19 ಗೆ ಪಾಸಿಟಿವ್ ಬಂದರೆ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ” ಎಂದಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top