ಮಂಗಳುರು : ಯುವ ಜನಾಂಗ ಇಂದು ಆಧುನಿಕತೆಯ ಪ್ರಭಾವಕ್ಕೊಳಗಾಗಿ ನಮ್ಮ ದೇಶ, ಭಾಷೆ, ಸಂಸ್ಕೃತಿಯ ಕುರಿತು ಅನಾದರ ಹೊಂದಿದೆ. ಇಂಥ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಎಳೆಯರಲ್ಲಿ ನಮ್ಮ ಸಂಸ್ಕೃತಿಯ ಕುರಿತು ಅರಿವು ಮೂಡಿಸಲು ಸಾಧ್ಯ. ಶ್ರೀಮಂತ ಪರಂಪರೆಯನ್ನು ಹೊಂದಿರುವ ನಮ್ಮ ಸಂಸ್ಕೃತಿಯಿಂದ ನಾವು ಹೊಸ ಉತ್ಸಾಹ, ಹೊಸ ಜೀವನ ದ್ರೃಷ್ಟಿಯನ್ನು ಪಡೆಯಬೇಕು ಎಂದು ಹಿರಿಯ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಶ್ರೀ ಕುಂಬ್ಳೆ ಸುಂದರ ರಾವ್ ಅವರು ಹೇಳಿದರು. ಅವರು ಮಂಗಳೂರಿನ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಾರದಾ ಮಹೋತ್ಸವ ಸಾಂಸ್ಕೃತಿಕ ಸ್ಪರ್ಧೆಗಳು 2015 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ. ಎಂ.ಬಿ.ಪುರಾಣಿಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ಮೊದಲಿಗೆ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ| ಡಿ.ಶ್ರೀಪತಿ ರಾವ್ ಅವರು ಸ್ವಾಗತಿಸಿ ಕೊನೆಯಲ್ಲಿ ಕು| ಸ್ನೇಹಾ ಭಟ್ ಅವರು ವಂದಿಸಿದರು. ಕು| ಸಂಹಿತಾ ಕಾರ್ಯಕ್ರಮ ನಿರ್ವಹಿಸಿದರು. ಸ್ಪರ್ಧಾ ಸಂಯೋಜಕರಾದ ಶ್ರೀ ರಮೇಶ ಆಚಾರ್ಯ ಅವರು ವಿವಿಧ ಸ್ಪರ್ಧೆಗಳ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಶಾರದಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಶ್ರೀ ಕೆ.ಎಸ್.ಕಲ್ಲೂರಾಯ, ಟ್ರಸ್ಟಿ ಶ್ರೀ ಪ್ರದೀಪ ಕುಮಾರ್ ಕಲ್ಕೂರ, ಶಾರದಾ ಶಿಕ್ಷಣ ಸಂಸ್ಥೆಗಳ ಸಲಹೆಗಾರರಾದ ಡಾ| ಲೀಲಾ ಉಪಾಧ್ಯಾಯ, ಶಾರದಾ ಪದವಿ ಪೂರ್ವ ಕಾಲೇಜಿನ ಉಪ-ಪ್ರಾಂಶುಪಾಲ ಶ್ರೀ ಮಹಾಬಲೇಶ್ವರ ಭಟ್ ಮತ್ತು ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.