News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼಕಲ್ಯಾಣ ರಾಜ್ಯ ಪ್ರಗತಿ ಪಕ್ಷʼ ಸ್ಥಾಪಿಸುವುದಾಗಿ ಜನಾರ್ಧನ ರೆಡ್ಡಿ ಘೋಷಣೆ

ಬೆಂಗಳೂರು:  ಬಿಜೆಪಿಯ ಮಾಜಿ ಸಚಿವ ಜನಾರ್ದನರೆಡ್ಡಿ ಇಂದು ಹೊಸ ಪಕ್ಷದ ಘೋಷಣೆ ಮಾಡದ್ದಾರೆ. ಇಂದು ಮುಂಜಾನೆ ಸುದ್ದಿಗೋಷ್ಠಿ ನಡೆಸಿದ ಅವರು ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾರೆ

ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼಕಲ್ಯಾಣ ರಾಜ್ಯ ಪ್ರಗತಿ ಪಕ್ಷʼ ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಹೊಸ ಪಕ್ಷವನ್ನು ಸಂಘಟನೆ ಮಾಡುತ್ತೇನೆ. ಸಾರ್ವಜನಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ಮುನ್ನಡೆಯುತ್ತೇನೆ. ರಾಜ್ಯದ ಪ್ರತಿಯೊಂದು ಮನೆಗೆ ತೆರಳುತ್ತೇನೆ. ಕರ್ನಾಟಕ ರಾಜ್ಯದ ಅಭಿವೃದ್ಧಿಯೇ ನನ್ನ ಗುರಿ ಎಂದು ಹೇಳಿದ್ದಾರೆ.

ನಾನು ಕೆಲಸ ಮಾಡಿದ ಪಕ್ಷದಿಂದ ಸ್ಥಾನಮಾನ ಸಿಗದ ಹಿನ್ನಲೆಯಲ್ಲಿ ಹೊಸ ಪಕ್ಷ ಸ್ಥಾಪಿಸಬೇಕಾಯಿತು. ಹೀಗಾಗಿ, ನಾನು ಕರ್ನಾಟಕ ರಾಜ್ಯ ಕಲ್ಯಾಣ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಮುಂದೆ ಹೆಜ್ಜೆ ಹಾಕುತ್ತೇನೆ. 10 ರಿಂದ 155 ದಿನಗಳಲ್ಲಿ ಪಕ್ಷದ ಚಿಹ್ನೆ, ಕಚೇರಿ ಬಗ್ಗೆ ಮಾಹಿತಿ ನೀಡುತ್ತೇನೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top