ಕಠ್ಮಂಡು: ನೇಪಾಳದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಪುಷ್ಪ ಕಮಲ್ ದಹಾಲ್ ‘ಪ್ರಚಂಡ’ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಭಾರತ ಮತ್ತು ನೇಪಾಳ ನಡುವಿನ ಅನನ್ಯ ಸಂಬಂಧವು ಆಳವಾದ ಸಾಂಸ್ಕೃತಿಕ ಸಂಪರ್ಕ ಮತ್ತು ಜನರ-ಜನರ ನಡುವಿನ ಅಪಾರ ಸಂಬಂಧವನ್ನು ಆಧರಿಸಿದೆ ಎಂದು ಟ್ವೀಟ್ನಲ್ಲಿ ಮೋದಿ ಹೇಳಿದ್ದಾರೆ.
ಅಲ್ಲದೇ ಈ ಸ್ನೇಹವನ್ನು ಮತ್ತಷ್ಟು ಬಲಪಡಿಸಲು ನೇಪಾಳದ ಪ್ರಧಾನಿಯೊಂದಿಗೆ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದಿದ್ದಾರೆ.
ನೇಪಾಳದ ಅಧ್ಯಕ್ಷೆ ಬಿಧ್ಯಾ ದೇವಿ ಭಂಡಾರಿ ಅವರು ಭಾನುವಾರ ಪ್ರಧಾನಮಂತ್ರಿಯಾಗಿ ನೇಪಾಳದ ಕಮ್ಯುನಿಸ್ಟ್ ಪಕ್ಷದ (ಮಾವೋವಾದಿ ಕೇಂದ್ರ) ಸಂಸದೀಯ ಪಕ್ಷದ ನಾಯಕ ಪುಷ್ಪ ಕಮಲ್ ದಹಾಲ್ ಅವರನ್ನು ನೇಮಕ ಮಾಡಿದ್ದಾರೆ.
‘ಪ್ರಚಂಡ’ ಎಂದೇ ಖ್ಯಾತರಾಗಿರುವ ದಹಾಲ್ ಅವರು ಇಂದು ಸಂಜೆ 4 ಗಂಟೆಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಿಟಲ್ ನಿವಾಸ್ನಲ್ಲಿರುವ ಅಧ್ಯಕ್ಷರ ಕಚೇರಿ ತಿಳಿಸಿದೆ.
Warmest congratulations @cmprachanda on being elected as the Prime Minister of Nepal. The unique relationship between India & Nepal is based on deep cultural connect & warm people-to-people ties. I look forward to working together with you to further strengthen this friendship.
— Narendra Modi (@narendramodi) December 25, 2022
— ☭ Comrade Prachanda (@cmprachanda) December 25, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.