News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

‌ಆರೋಗ್ಯ ಸಮಸ್ಯೆ: ಏಮ್ಸ್‌ಗೆ ದಾಖಲಾದ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ದೆಹಲಿಯ‌ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 63 ವರ್ಷದ ಸಚಿವರನ್ನು ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಸ್ಪತ್ರೆಯ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸೀತಾರಾಮನ್‌ ಏಮ್ಸ್‌ಗೆ ದಾಖಲಾದ ಬಗ್ಗೆ ಎಲ್ಲೆಡೆ ವರದಿಗಳು ಬಿತ್ತರವಾಗಿ ಆತಂಕ ಸೃಷ್ಟಿಸಿದೆ. ಆದರೆ ಅವರು ಸಾಮಾನ್ಯ ಆರೋಗ್ಯ ತಪಾಸಣೆಗಾಗಿ  ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದು ಮೂಲದ ಪ್ರಕಾರ ಅವರು ಹೊಟ್ಟೆಯ ಸೋಂಕಿಗೆ ಗುರಿಯಾಗಿದ್ದು ಅದಕ್ಕಾಗಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದಾರೆ, ಅವರ ಪರಿಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಶನಿವಾರ, ನಿರ್ಮಲಾ ಸೀತಾರಾಮನ್ ಅವರು ಚೆನ್ನೈನಲ್ಲಿರುವ ತಮಿಳುನಾಡು ಡಾ ಎಂಜಿಆರ್ ವೈದ್ಯಕೀಯ ವಿಶ್ವವಿದ್ಯಾಲಯದ 35 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು. ತಮಿಳುನಾಡಿನಲ್ಲಿ ವೈದ್ಯಕೀಯ ಶಿಕ್ಷಣವನ್ನು ತಮಿಳು ಭಾಷೆಯಲ್ಲಿ ಕಲಿಸಬೇಕು ಎಂದು  ಅವರು ಕರೆ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top