News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೋವಿಡ್ ಸಿದ್ಧತೆ: ಇಂದು ರಾಷ್ಟ್ರವ್ಯಾಪಿ ಎಲ್ಲಾ ಆಸ್ಪತ್ರೆಗಳಲ್ಲಿ ಅಣಕು ಡ್ರಿಲ್

ನವದೆಹಲಿ: ದೇಶದಲ್ಲಿ ಕೋವಿಡ್-19 ತುರ್ತು ಸಿದ್ಧತೆಯನ್ನು ಪರಿಶೀಲಿಸಲು ಇಂದು ಎಲ್ಲಾ ಆಸ್ಪತ್ರೆಗಳಲ್ಲಿ ರಾಷ್ಟ್ರವ್ಯಾಪಿ ಅಣಕು ಡ್ರಿಲ್ ನಡೆಸಲಾಗುತ್ತಿದೆ.

ಚೀನಾ, ಯುಎಸ್ ಸೇರಿದಂತೆ ಇತರ ಕೆಲವು ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಈ ಅಣಕು ಡ್ರಿಲ್ ನಡೆಸಲಾಗುತ್ತಿದೆ.

ಕೋವಿಡ್ ವಿರುದ್ಧ ಹೋರಾಡಲು ಆಸ್ಪತ್ರೆಯಲ್ಲಿ ಲಭ್ಯವಿರುವ ಸಂಪನ್ಮೂಲಗಳು, ಮೂಲಸೌಕರ್ಯ ಸಿದ್ಧತೆ ಸೇರಿದಂತೆ ಆಮ್ಲಜನಕ ಸಘಟಕಗಳು, ವೆಂಟಿಲೇಟರ್‌ಗಳು, ಲಾಜಿಸ್ಟಿಕ್ಸ್ ಮತ್ತು ಮಾನವ ಸಂಪನ್ಮೂಲಗಳ ಮೇಲೆ ಅಣಕು ಡ್ರಿಲ್ ನಿರ್ದಿಷ್ಟವಾಗಿ ಗಮನಹರಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿನ ಕೋವಿಡ್ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಿದ ಕೆಲವು ದಿನಗಳ ನಂತರ ಈ ಡ್ರಿಲ್ ನಡೆಸಲು ನಿರ್ಧರಿಸಲಾಗಿದೆ.

ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ನವದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಜಾಗತಿಕವಾಗಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ದೃಷ್ಟಿಯಿಂದ ಯಾವುದೇ ರೀತಿಯ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಅವರು ಆಸ್ಪತ್ರೆಯ ನಿಗದಿತ ಅಣಕು ಡ್ರಿಲ್ ಸಮಯದಲ್ಲಿ ಅಲ್ಲಿ ಹಾಜರಿರುತ್ತಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top