ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಕೋವಿಡ್ ಸನ್ನದ್ಧತೆಯನ್ನು ಪರಿಶೀಲಿಸಿದರು. ವೈರಸ್ ವಿರುದ್ಧದ ಹೋರಾಟದಲ್ಲಿ ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳಲು ದೇಶಾದ್ಯಂತ ಡ್ರಿಲ್ಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಭೇಟಿ ನೀಡಿದ್ದಾರೆ.
“ವಿಶ್ವಾದ್ಯಂತ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಎಚ್ಚರದಿಂದಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಸಿದ್ದಾರೆ” ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
“ನಾವು ಕೋವಿಡ್ ಸನ್ನದ್ಧತೆಯನ್ನು ಖಾತ್ರಿಪಡಿಸಿಕೊಳ್ಳಬೇಕು. ಮುಂಬರುವ ದಿನಗಳಲ್ಲಿ ವೈರಸ್ ಹರಡದಂತೆ ಸರ್ಕಾರವು ಖಚಿತಪಡಿಸಿಕೊಳ್ಳುತ್ತಿದೆ. ಪರಿಸ್ಥಿತಿಯು ಉಲ್ಬಣಗೊಂಡರೆ ಪ್ರಕರಣವನ್ನು ನಿಭಾಯಿಸಲು ಆಸ್ಪತ್ರೆಗಳು ಸಿದ್ಧವಾಗಿವೆ ಎಂದು ನಾವು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯು ಸಿದ್ಧವಾಗಿರುವ ರೀತಿಯಲ್ಲಿ ಇತರ ಆಸ್ಪತ್ರೆಗಳು ಸಹ ಸಿದ್ಧವಾಗಿರಬೇಕೆಂದು ನಾವು ಬಯಸುತ್ತೇವೆ. ರಾಜ್ಯ ಆರೋಗ್ಯ ಸಚಿವರುಗಳು ಎಲ್ಲೆಡೆ ಕೋವಿಡ್ ನಿಯಮಗಳು ಪಾಲನೆಯಾಗುತ್ತಿವೆ ಎಂಬುದನ್ನು ಖಚಿತಪಡಿಸಿಕೊಳ್ಳುತ್ತಿದ್ದಾರೆ”ಎಂದು ಅವರು ಪ್ರತಿಪಾದಿಸಿದ್ದಾರೆ.
ಆರೋಗ್ಯ ಸಚಿವರು ಡ್ರಿಲ್ನಲ್ಲಿ ಭಾಗಿಯಾದ ತಮ್ಮ ಫೋಟೋಗಳನ್ನು ಸಹ ಹಂಚಿಕೊಂಡಿದ್ದಾರೆ.
कोविड से सतर्क रहने हेतु प्रधानमंत्री @NarendraModi जी के आदेश अनुसार, पुरे देशभर में आज कोविड अस्पतालों में mock drill की जा रही है।
मैंने सफदरजंग अस्पताल में कोविड रिस्पॉन्स मॉक ड्रिल की समीक्षा की। pic.twitter.com/DQ3Efas9YD
— Dr Mansukh Mandaviya (@mansukhmandviya) December 27, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.