News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಚೀನಾ ಬೆದರಿಕೆ:‌ ನಾಗರಿಕರಿಗೆ 1 ವರ್ಷ ಮಿಲಿಟರಿ ಸೇವೆ ಕಡ್ಡಾಯಗೊಳಿಸಿದ ತೈವಾನ್

ತೈಪೆ: ಚೀನಾದಿಂದ ನಿರಂತರ ಬೆದರಿಕೆಗಳನ್ನು ಎದುರಿಸುತ್ತಿರುವ ತೈವಾನ್‌ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ತನ್ನ ನಾಗರಿಕರಿಗೆ ಒಂದು ವರ್ಷಗಳ ಮಿಲಿಟರಿ ಸೇವೆಯನ್ನು ಕಡ್ಡಾಯಗೊಳಿಸಿದೆ. ಮೊದಲು ಕಡ್ಡಾಯ ಮಿಲಿಟರಿ ಸೇವೆ ಕೇವಲ ನಾಲ್ಕು ತಿಂಗಳು ಇತ್ತು. ಈಗ ಅದನ್ನು ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ.

ಇತ್ತೀಚಿಗೆ ಚೀನಾ ತನ್ನ 71 ಯುದ್ಧ ವಿಮಾನಗಳನ್ನು ತೈವಾನ್‌ ಸುತ್ತ ನಿಯೋಜಿಸಿ ತಾಲೀಮು ನಡೆಸಿದ ತರುವಾಯ ತೈವಾನ್‌ ಈ ಮಹತ್ವದ ಘೋಷಣೆಯನ್ನು ಹೊರಡಿಸಿದೆ.

ಚೀನಾದಿಂದ ಬೆದರಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಡ್ಡಾಯ ಮಿಲಿಟರಿ ಸೇವೆಯನ್ನು ನಾಲ್ಕು ತಿಂಗಳಿಂದ ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ ಎಂದು ತೈವಾನ್ ಅಧ್ಯಕ್ಷೆ ತ್ಸೈ ಇಂಗ್-ವೆನ್ ಹೇಳಿದ್ದಾರೆ.

ಯಾರೂ ಯುದ್ಧವನ್ನು ಬಯಸುವುದಿಲ್ಲ. ಆದರೆ ಶಾಂತಿ ಮೇಲಿನಿಂದ ಬೀಳುವುದಿಲ್ಲ. ಬದಲಾಗುತ್ತಿರುವ ಈ ಪರಿಸ್ಥಿತಿಯಲ್ಲಿ ಪ್ರಸ್ತುತ ಇರುವ ನಾಲ್ಕು ತಿಂಗಳ ತರಬೇತಿ ಸಾಕಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top