News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ಮೈಸೂರು: ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇಂದು ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ.

ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಹ್ಲಾದ್ ಮೋದಿ ಅವರ ದವಡೆಗೆ ಗಾಯಗಳಾಗಿದ್ದು, ಅವರ ಸೊಸೆ ತಲೆಗೆ ಗಾಯವಾಗಿದೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವಿಷಯ ತಿಳಿಯುತ್ತಿದ್ದಂತೆ ಮೈಸೂರು ಎಸ್​ಪಿ ಸೀಮಾ ಲಾಟ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top