News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಂಡಮಾನ್ & ನಿಕೋಬಾರ್‌ನಲ್ಲಿ ರೂ.10,000 ಕೋಟಿ ಹೂಡಿಕೆ ಮಾಡಲಿದೆ ಕೇಂದ್ರ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸರ್ಕಾರವು ಕಳೆದ ಎಂಟು ವರ್ಷಗಳಲ್ಲಿ 30,000 ಕೋಟಿ ರೂಪಾಯಿ ಹೂಡಿಕೆ ಮಾಡಿದೆ ಮತ್ತು 10,000 ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಗಳು ಪ್ರಕ್ರಿಯೆಯಲ್ಲಿವೆ ಎಂದು ಕೇಂದ್ರ ಸಚಿವ ಎಲ್ ಮುರುಗನ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುರುಗನ್, ಗ್ರೇಟ್ ನಿಕೋಬಾರ್ ದ್ವೀಪದಲ್ಲಿ ಪ್ರಸ್ತಾವಿತ ಮೆಗಾ ಮೂಲಸೌಕರ್ಯ ಯೋಜನೆಯ ಭಾಗವಾಗಿ ಟ್ರಾನ್ಸ್‌ಶಿಪ್‌ಮೆಂಟ್ ಹಬ್, ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಟೌನ್‌ಶಿಪ್ ಮತ್ತು ಡೀಸೆಲ್ / ಸೌರ ವಿದ್ಯುತ್ ಸ್ಥಾವರವನ್ನು ಯೋಜಿಸಲಾಗಿದೆ ಎಂದು ಹೇಳಿದರು.

“ಕಳೆದ ಎಂಟು ವರ್ಷಗಳಲ್ಲಿ, ನಮ್ಮ ಸರ್ಕಾರವು ದ್ವೀಪಗಳ ಅಭಿವೃದ್ಧಿಗೆ 30,000 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಹೂಡಿಕೆ ಮಾಡಿದೆ ಮತ್ತು ನಿಮಗೆ ತಿಳಿದಿರುವಂತೆ 10,000 ಕೋಟಿ ರೂಪಾಯಿ ಮೌಲ್ಯದ ಹೂಡಿಕೆಗಳು ಪ್ರಕ್ರಿಯೆಯಲ್ಲಿವೆ. ಇದು ಸ್ಥಳೀಯ ಯುವಕರಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮಾತ್ರವಲ್ಲದೇ  ಅಲ್ಲಿನ ಆರ್ಥಿಕತೆಯನ್ನು ವೃದ್ಧಿಸುತ್ತದೆ ” ಎಂದು ಅವರು ಹೇಳಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಾವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಅಭಿವೃದ್ಧಿಗೆ ಬದ್ಧರಾಗಿದ್ದೇವೆ” ಎಂದು ಮುರುಗನ್ ಹೇಳಿದ್ದಾರೆ.

ಸ್ಥಳೀಯ ಆಡಳಿತದಿಂದ ಕೇಂದ್ರದ ಯೋಜನೆಗಳ ಅನುಷ್ಠಾನದ ಬಗ್ಗೆ ಸಚಿವರು ತೃಪ್ತಿ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸುಮಾರು 62,000 ನೀರಿನ ಸಂಪರ್ಕಗಳನ್ನು ಒದಗಿಸಲಾಗಿದೆ ಮತ್ತು 1,338 ಮನೆಗಳ 95% ಕ್ಕಿಂತ ಹೆಚ್ಚು ಕೆಲಸ ಪೂರ್ಣಗೊಂಡಿದೆ ಎಂದು ಹೇಳಲು ಸಂತೋಷವಾಗಿದೆ ಎಂದಿದ್ದಾರೆ.

ಕೇಂದ್ರಾಡಳಿತ ಪ್ರದೇಶವು ಪಿಎಂ ಕಿಸಾನ್ ಯೋಜನೆಯಡಿ ಸುಮಾರು 15,500 ಫಲಾನುಭವಿಗಳನ್ನು ಹೊಂದಿದೆ ಎಂದು ಮುರುಗನ್ ಹೇಳಿದ್ದಾರೆ.

ವಿಮಾನಯಾನ ವಲಯದಲ್ಲಿ ಸುಮಾರು 710 ಕೋಟಿ ರೂಪಾಯಿಗಳನ್ನು ದ್ವೀಪಗಳಲ್ಲಿ ಹೂಡಿಕೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top