News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎರಡು ದಿನಗಳ ಭೇಟಿಗಾಗಿ ನಾಳೆ ರಾಜ್ಯಕ್ಕೆ ಅಮಿತ್‌ ಶಾ

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ನಾಳೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಎರಡು ದಿನಗಳ ತಮ್ಮ ಭೇಟಿಯಲ್ಲಿ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

 ಡಿಸೆಂಬರ್ 29ರಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ಅವರು ಡಿ. 30  ಮತ್ತು 31ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಡಿಸೆಂಬರ್​ 30ರಂದು ಮಧ್ಯಾಹ್ನ 12.30ಕ್ಕೆ ಅವರು ಮಂಡ್ಯದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಎಂ. ಸಿ. ರಸ್ತೆಯ ಪ್ರವಾಸಿ ಮಂದಿರದ ಸಮೀಪದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯಲಿದೆ.

ಡಿಸೆಂಬರ್​ 31ರಂದು ಬಿಎಲ್ 2 ಮತ್ತು ಬೂತ್ ಅಧ್ಯಕ್ಷರ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಅಮಿತ್ ಶಾ ಅವರು ಈ ಸಮಾವೇಶದಲ್ಲಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಅಮಿತ್ ಶಾ ಅವರ ಈ ಭೇಟಿಯು ಪಕ್ಷದ ಗೆಲುವಿನ ಓಟಕ್ಕೆ ಮತ್ತಷ್ಟು ಶಕ್ತಿ ತುಂಬಲಿದೆ ಎಂಬ ವಿಶ್ವಾಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಕ್ತಪಡಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top