ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಿದ್ರಾ ಪ್ರದೇಶದಲ್ಲಿ ಇಂದು ಭೀಕರ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಹತ್ಯೆಗೀಡಾದ ಮೂವರು ಉಗ್ರರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಬೆಳಿಗ್ಗೆ 7.30 ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಮತ್ತು ಭಯೋತ್ಪಾದಕರನ್ನು ಹತ್ತಿಕ್ಕಲು ಹೆಚ್ಚುವರಿ ಯೋಧರು ಪ್ರದೇಶಕ್ಕೆ ಧಾವಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎನ್ಕೌಂಟರ್ ಕುರಿತು ಮಾಹಿತಿ ನೀಡಿರುವ ಎಜಿಡಿಪಿ ಮುಕೇಶ್ ಸಿಂಗ್ ಅವರು, “ಹೆದ್ದಾರಿಯಲ್ಲಿ ಟ್ರಕ್ ಒಂದು ಅನುಮಾನಾಸ್ಪದವಾಗಿ ಸಂಚರಿಸುವುದು ಕಂಡ ಕೂಡಲೇ ಅದನ್ನು ಹಿಂಬಾಲಿಸಲಾಗಿತ್ತು. ಜಮ್ಮುವಿನ ಸಿಧ್ರಾ ಪ್ರದೇಶದಲ್ಲಿ ಟ್ರಕ್ ಅನ್ನು ನಿಲ್ಲಿಸಿ ಅದರಲ್ಲಿದ್ದ ಚಾಲಕ ಪರಾರಿಯಾದ. ಟ್ರಕ್ ಅನ್ನು ಪರಿಶೀಲಿಸಿದಾಗ ಉಗ್ರರು ಅದರೊಳಗೆ ಅಡಗಿ ಕುಳಿತಿರುವುದು ಕಂಡು ಬಂದಿತ್ತು. ಭದ್ರತಾ ಸಿಬ್ಬಂದಿಗಳನ್ನು ನೋಡಿದ ಕೂಡಲೇ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದರು, ಇದು ಎನ್ಕೌಂಟರ್ಗೆ ದಾರಿ ಮಾಡಿಕೊಟ್ಟಿತು” ಎಂದಿದ್ದಾರೆ.
ಉಗ್ರರ ಬಳಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳಿರುವುದು ಪತ್ತೆಯಾಗಿದೆ. ಉಗ್ರರು ದಾಳಿ ನಡೆಸಲು ಆರಂಭಿಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದ ಯೋಧರು ಅವರಿಗೆ ದಿಟ್ಟ ಉತ್ತರ ನೀಡಿದರು. ಸ್ಥಳದಲ್ಲಿ ಮೂವರು ಉಗ್ರರು ಹತ್ಯೆಯಾಯಿತು ಎಂದು ತಿಳಿಸಿದ್ದಾರೆ.
J&K | We noticed unusual movement of a truck & followed it. Truck was stopped at Sidhra in Jammu where driver managed to flee. When the truck was searched terrorists hiding inside, fired on the personnel. Retaliatory firing was done: ADGP Mukesh Singh pic.twitter.com/u9UmTFc5rt
— ANI (@ANI) December 28, 2022
J&K | Encounter starts in Sidhra area in Jammu, firing going on, two terrorists likely on the spot: J&K police
— ANI (@ANI) December 28, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.